ರಾಯಚೂರು : ತೈಲ ದರ ಏರಿಕೆ ವಿರುದ್ಧ ಆಕ್ರೋಶ : ಗಾಡಿಗೆ ಹಗ್ಗ ಕಟ್ಟಿ ಎಳೆದು SUCI ಪ್ರತಿಭಟನೆ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ರಾಯಚೂರಿನಲ್ಲಿ ಎಸ್’ಯುಸಿಐನಿಂದ ವಿನೂತನವಾಗಿ ಪ್ರತಿಭಟನೆ ಮಾಡಲಾಯ್ತು. ನಗರದ ತಹಶೀಲ್ದಾರ್ ಕಚೇರಿ ಎದುರು ವಾಹನಗಳಿಗೆ ಹಗ್ಗ ಕಟ್ಟಿ ಎಳೆಯುವ ಮೂಲಕ ತೈಲ ಬೆಲೆ ಏರಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರಾಯಚೂರಿನ ತಹಶೀಲ್ದಾರ್, ಡಿಡಿಪಿಐ ಕಚೇರಿ, ಅಂಬೇಡ್ಕರ್ ವೃತ್ತ, ಡಿಸಿ ಕಚೇರಿ ಸೇರಿದಂತೆ ವಿವಿಧೆಡೆ ಪ್ರತಿಭಟನಾ ಮೆರವಣಿಗೆ ನಡೆಸಿದ್ರು. ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್‌ ಬೆಲೆ ಏರಿಕೆಯಾಗುತ್ತಿದ್ದು ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Leave a Reply

Your email address will not be published.

Social Media Auto Publish Powered By : XYZScripts.com