Cricket : ಅಂತರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ ಎಬಿ ಡಿವಿಲಿಯರ್ಸ್

ದಕ್ಷಿಣ ಆಫ್ರಿಕಾದ ಬ್ಯಾಟ್ಸಮನ್ ಎಬಿ ಡಿವಿಲಿಯರ್ಸ್ ಅಂತರಾಷ್ಟ್ರೀ ಕ್ರಿಕೆಟ್ ಗೆ ಬುಧವಾರ ವಿದಾಯ ಹೇಳಿದ್ದಾರೆ. ಟೆಸ್ಟ್, ಏಕದಿನ ಹಾಗೂ ಟಿ-20 ಮೂರೂ ಮಾದರಿಯ ಕ್ರಿಕೆಟ್ ನಿಂದ ಡಿವಿಲಿಯರ್ಸ್ ನಿವೃತ್ತಿ ಘೋಷಿಸಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ವಿಡಿಯೋ ಮೆಸೇಜ್ ಪೋಸ್ಟ್ ಮಾಡಿರುವ ಡಿವಿಲಿಯರ್ಸ್ ತಮ್ಮ ನಿವೃತ್ತಿಯ ನಿರ್ಧಾರವನ್ನು ಪ್ರಕಟಿಸಿದ್ದಾರೆ.

‘114 ಟೆಸ್ಟ್, 228 ಏಕದಿನ ಹಾಗೂ 78 ಟಿ-20 ಪಂದ್ಯಗಳನ್ನು ಆಡಿದ್ದೇನೆ. ಇದೀಗ ಯುವ ಆಟಗಾರರಿಗೆ ಅವಕಾಶ ನೀಡುವ ಸಮಯ ಬಂದಿದೆ. ಪ್ರಾಮಾಣಿಕವಾಗಿ ಹೇಳುವುದಾರೆ ನಾನೀಗ ತುಂಬ ದಣಿದಿದ್ದೇನೆ, ನಿವೃತ್ತಿ ಕೈಗೊಳ್ಳಲು ಇದು ಸರಿಯಾದ ಸಮಯ ಎಂದು ಭಾವಿಸುತ್ತೇನೆ ‘ ಎಂದು ಎಬಿಡಿ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

One thought on “Cricket : ಅಂತರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ ಎಬಿ ಡಿವಿಲಿಯರ್ಸ್

Leave a Reply

Your email address will not be published.

Social Media Auto Publish Powered By : XYZScripts.com