ನಿರ್ಣಾಯಕ ಹಂತದಲ್ಲಿ ಕಾಂಗ್ರೆಸ್‌ ನಾಯಕರ ವಿರುದ್ದವೇ ತಿರುಗಿಬಿದ್ದ ಡಿಕೆಶಿ….ಇಲ್ಲಿದೆ ಡಿಟೇಲ್ಸ್‌

ಬೆಂಗಳೂರು : ಕೆಲಸ ಮಾಡಲು ಮಾತ್ರ ನಾವು ಬೇಕು. ಅಧಿಕಾರ ಮಾತ್ರ ಬೇರೆಯವರು ಅನುಭವಿಸಬೇಕಾ ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ಡಿ.ಕೆ ಸಹೋದರರು ಅಸಮಾಧಾನ ಹೊರಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಮನವೊಲಿಸುವ ಕೆಲಸ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಹಿಲ್ಟನ್ ನ ಹೋಟೆಲ್ ನಿಂದ ಡಿಕೆಶಿ ಸಹೋದರರು ಹೊರಹೋಗಿದ್ದಾರೆ ಎಂದು ತಿಳಿದುಬಂದಿದ್ದು, ಅಲ್ಲದೇ ಡಿಕೆ ಬ್ರದರ್ಸ್ ಯಾರ ದೂರವಾಣಿ ಕರೆಯನ್ನೂ ಸ್ವೀಕರಿಸುತ್ತಿಲ್ಲ ಎಂದು ಮಾಧ್ಯಮಗಳು ಸುದ್ದಿ ಬಿತ್ತರಿಸಿವೆ.

ಪರಮೇಶ್ವರ್ ಹಾಗೂ ಕೆಸಿ ವೇಣುಗೋಪಾಲ್ ಅವರು ಡಿಕೆ ಶಿವಕುಮಾರ್ ಅವರನ್ನು ಸಂಪರ್ಕಿಸಲು ಯತ್ನಿಸುತ್ತಿದ್ದರೂ ಸಾಧ್ಯವಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದ್ದು, ತಮಗೆ ಉಪಮುಖ್ಯಮಂತ್ರಿ ಹುದ್ದೆ ಬೇಕೆ, ಬೇಕು ಎಂದು ಡಿಕೆಶಿ ಪಟ್ಟು ಹಿಡಿದಿದ್ದಾರೆನ್ನಲಾಗಿದೆ.

 

Leave a Reply

Your email address will not be published.

Social Media Auto Publish Powered By : XYZScripts.com