ಸೋಲೊಪ್ಪಿಕೊಂಡರಾ ಅಮಿತ್ ಶಾ : ಶಾಸಕರು ರೆಸಾರ್ಟ್‌ ಹೋಗದಿದ್ದರೆ ಬಿಜೆಪಿ ಅಧಿಕಾರಕ್ಕೆ ಬರ್ತಿತ್ತು ಎಂದ ನಾಯಕ !

ಕರ್ನಾಟಕದ ಚುನಾವಣೆಯ ಫಲಿತಾಂಶದ ಬಳಿಕ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಉಂಟಾಗಿತ್ತು. ಇದಾದ ಬಳಿಕ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಏನಾದರೂ ಮಾಸ್ಟರ್‌ ಪ್ಲ್ಯಾನ್‌ ಮಾಡುತ್ತಾರೆ. ಬಿಜೆಪಿಯೇ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದವರಿಗೆ ನಿರಾಸೆಯಾಗಿದ್ದಂತೂ ಸತ್ಯ.

ಚುನಾವಣೆ ಫಲಿತಾಂಶದ ಬಳಿಕ ಅಮಿತ್ ಶಾ ಸುದ್ದಿಗೋಷ್ಠಿಯಲ್ಲಿ ನೀಡಿದ್ದ ಹೇಳಿಕೆ ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಶಾಸಕರನ್ನು ರೆಸಾರ್ಟ್‌ನಲ್ಲಿ ಇರಿಸದೇ ಹೋಗಿದ್ದರೆ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವೇ ಅಧಿಕಾರಕ್ಕೆ ಬರುತ್ತಿತ್ತು ಎಂದು ಅಮಿತ್ ಶಾ ಹೇಳಿದ್ದು, ಈ ಹೇಳಿಕೆಗೆ ಎಲ್ಲೆಡೆ ವಿರೋಧ ವ್ಯಕ್ತವಾಗುತ್ತಿದೆ.

ಅಮಿತ್ ಶಾ ಹೇಳಿಕೆ ಕುರಿತು ಖ್ಯಾತ ವಕೀಲರು, ಪತ್ರಕರ್ತರು, ಐಎಎಸ್‌, ಐಪಿಎಸ್‌ ಅಧಿಕಾರಿಗಳೂ ವಿರೋಧಿಸಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com