ಎಂ.ಬಿ ಪಾಟೀಲ್, ಹೊರಟ್ಟಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಬೇಕು : ಚಿಂತಾಮಣಿ ಸಿಂದಗಿ

ಹುಬ್ಬಳ್ಳಿ : ಲಿಂಗಾಯತ ಮಹಾಸಭಾದ ರಾಜ್ಯ ಸಂಚಾಲಕ ಚಿಂತಾಮಣಿ ಸಿಂದಗಿ ಹೇಳಿಕೆ ನೀಡಿದ್ದಾರೆ. ‘ ಕಾಂಗ್ರೆಸ್ ಮುಖಂಡ ಎಂ.ಬಿ.ಪಾಟೀಲ್ ಹಾಗೂ ಜೆಡಿಎಸ್ ನಾಯಕ ಬಸರಾಜ್ ಹೊರಟ್ಟಿಗೆ ಸಂಪುಟ ದರ್ಜೆ ಸ್ಥಾನ ನೀಡಬೇಕು. ಎಂ.ಬಿ. ಪಾಟೀಲ್ ರಿಗೆ ಉತ್ತರ ಕರ್ನಾಟಕ ಅಭಿವೃದ್ಧಿ ದೃಷ್ಠಿಯಿಂದ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ‘ ಎಂದು ಹುಬ್ಬಳ್ಳಿಯಲ್ಲಿ ಸುದ್ದಿಗೊಷ್ಠಿ ನಡೆಸಿ ವಿಶ್ವಲಿಂಗಾಯತ ಮಹಾಸಭಾದ ರಾಜ್ಯ ಸಂಚಾಲಕ ಆಗ್ರಹಿಸಿದ್ದಾರೆ.

ಉತ್ತರ ಕರ್ನಾಟಕ ಲಿಂಗಾಯತ ಮುಖಂಡರಿಗೆ ಸೂಕ್ತ ಸ್ಥಾನ ಮಾನ ನೀಡುವಂತೆ ಒತ್ತಾಯ ಮಾಡಲಾಗಿದ್ದು, ಈ ಬಗ್ಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಜೆಡಿಎಸ್ ವರಿಷ್ಠ ದೇವೆಗೌಡರಿಗೆ ಮನವಿ ಮಾಡಲಾಗಿದೆ. ಇನ್ನೋರ್ವ ಲಿಂಗಾಯತ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿಯವರಿಗೆ ಕ್ಯಾಬಿನೆಟ್ ದರ್ಜೆ ಸ್ಥಾನ ಮಾನ ನೀಡುವಂತೆ ಒತ್ತಾಯ ಪಡಿಸಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com