ಸಿಎಂ ಆದ ಶಮಿಕಾ ತಂದೆಗೆ ಶುಭಕೋರಿದ ರಾಧಿಕಾ ಕುಮಾರಸ್ವಾಮಿ..!

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಎರಡನೇ ಬಾರಿಗೆ ಕರ್ನಾಟಕದ ಸಿಎಂ ಆಗಿ ಪದಗ್ರಹಣ ಮಾಡಿರುವ ಕುಮಾರಸ್ವಾಮಿಗೆ ರಾಜ್ಯಪಾಲ ವಜೂಭಾಯಿ ವಾಲಾ ಪ್ರತಿಜ್ಞಾವಿಧಿ ಬೋಧಿಸಿದರು.

ಇಂದು ಬೆಳಿಗ್ಗೆ ಎಚ್ಡಿಕೆ ಪ್ರಮಾಣ ವಚನ ಸ್ವೀಕರಿಸುವುದಕ್ಕೂ ಮುನ್ನ ರಾಧಿಕಾ ಕುಮಾರಸ್ವಾಮಿ ತಮ್ಮ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಎಚ್ ಡಿಕೆ ಹಾಗೂ ಪುತ್ರಿ ಶಮಿಕಾ ಜೊತೆಗಿರುವ ಚಿತ್ರವೊಂದನ್ನು ಪೋಸ್ಟ್ ಮಾಡಿರುವ ಸ್ಯಾಂಡಲ್ ವುಡ್ ನಟಿ ರಾಧಿಕಾ ಕುಮಾರಸ್ವಾಮಿ ‘ ಬೆಸ್ಟ್ ವಿಷಸ್ ಎಚ್ ಡಿಕೆ, ಆಲ್ ದಿ ಬೆಸ್ಟ್ ‘ ಎಂದು ಬರೆದುಕೊಂಡಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com