BREAKING NEWS : ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ರಾಜೀನಾಮೆ…..?!!

ಬೆಂಗಳೂರು : ಬುಧವಾರ ತಾನೆ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದ ಕಾಂಗ್ರೆಸ್‌ ನಾಯಕ ಜಿ. ಪರಮೇಶ್ವರ್‌ ಇಂದು ತಮ್ಮ ವಿಧಾನಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಕೊರಟಗೆರೆ ಕ್ಷೇತ್ರದಿಂದ  ವಿಧಾನಪರಿಷತ್‌ಗೆ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ  ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಿಗ್ಗೆ ವಿಧಾನ ಪರಿಷತ್ ಸಭಾಪತಿ ಶಂಕರ ಮೂರ್ತಿಯವರಿಗೆ ಪರಮೇಶ್ವರ್‌ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಕಳೆದ ಚುನಾವಣೆಯಲ್ಲು ಸೋತ ಕಾರಣ ಅವರು ವಿಧಾನಪರಿಷತ್ತಿಗೆ ಆಯ್ಕೆಯಾಗಿ ಬಳಿಕ ಕೆಪಿಸಿಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಈಗ ನೇರವಾಗಿ ಚುನಾವಣೆಯಲ್ಲಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ತಮ್ಮ ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com