ಶುಕ್ರವಾರ ವಿಧಾನಸಭೆ ಅಧಿವೇಶನ : ವಿಶ್ವಾಸಮತಯಾಚನೆಗೆ ಸಿಎಂ HDK ಸಜ್ಜು – BJP plan ಏನು..?

ನಾಳೆ ವಿಧಾನಸಭಾ ಅಧಿವೇಶನ ನಡೆಯಲಿದ್ದು, ಇದಕ್ಕೂ ಮುನ್ನ ವಿಧಾನಸಭೆಯ ನೂತನ ಸಭಾಧ್ಯಕ್ಷರ ಆಯ್ಕೆ ನಡೆಯಲಿದೆ. ಬಳಿಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರ್ಕಾರದ ವಿಶ್ವಾಸಮತ ಯಾಚಿಸಲಿದ್ದಾರೆ.
ವಿಧಾನಸಭಾಧ್ಯಕ್ಷರ ಚುನಾವಣಾ ಸ್ಪರ್ಧೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಬೆಂಬಲದೊಂದಿಗೆ ವಿಧಾನಸಭೆಯ ಮಾಜಿ ಅಧ್ಯಕ್ಷ ರಮೇಶ್‍ ಕುಮಾರ್ ಹಾಗೂ ಬಿಜೆಪಿಯಿಂದ ಎಸ್.ಸುರೇಶ್‍ಕುಮಾರ್ ಅವರು ಕಣದಲ್ಲಿದ್ದಾರೆ.
ನಾಳೆ ಮಧ್ಯಾಹ್ನ 12.15ಕ್ಕೆ ವಿಧಾನಸಭೆ ಅಧಿವೇಶನ ಪ್ರಾರಂಭವಾಗಲಿವ ಕಾರಣ ಸಭಾಧ್ಯಕ್ಷರ ಚುನಾವಣೆ ನಡೆದು ನೂತನ ಸಭಾಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತದೆ.

ಇದಾದ ನಂತರ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ಮಾಡಲಿದ್ದಾರೆ. ವಿಶ್ವಾಸ ಮತಯಾಚನೆಗೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಜ್ಜಾಗಿದ್ದು ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ. ನಾಳೆ ವಿಶ್ವಾಸ ಮತಯಾಚನೆ ಬಳಿಕ ಶಾಸಕರ ರೆಸಾರ್ಟ್ ವಾಸ್ತವ್ಯ ಅಂತ್ಯಗೊಳ್ಳಲಿದೆ.

ಇನ್ನು ಜೆಡಿಎಸ್‌-ಕಾಂಗ್ರೆಸ್‌ ನಾಯಕರು ಬಹುಮತ ಸಾಬೀತು ಪಡಿಸುವ ದಿನವನ್ನೇ ಕಾಯುತ್ತಿರುವ  ಬಿಜೆಪಿ ಯಾವ ತಂತ್ರಗಾರಿಕೆ ಹೆಣೆಯುತ್ತಿದೆ ಎಂಬುದು ಇನ್ನೂ ತಿಳಿದಿಲ್ಲ. ಆದರೆ ಯಡಿಯೂರಪ್ಪ ಹಾಗೂ ಮುರಳೀಧರ್‌ ರಾವ್‌ ಹೇಳಿರುವ ಪ್ರಕಾರ ನಾಳೆ ಬಿಜೆಪಿ ತನ್ನ ತಂತ್ರಗಾರಿಗೆ  ತೋರಿಸಲಿದೆ ಎಂಬುದಂತೂ ಸತ್ಯ ಎಂದು ಬಲ್ಲ ಮೂಲಗಳು ಹೇಳುತ್ತಿವೆ. ಆದರೆ ಮತ್ತೊಂದು ಮೂಲದ ಪ್ರಕಾರ  ನಾಳೆ  ಬಹುಮತ ಸಾಬೀತಿನ ವೇಳೆ ಬಿಜೆಪಿ ಬಹಿಷ್ಕಾರ ಹಾಕಲಿದೆ ಎಂದೂ ಹೇಳಲಾಗುತ್ತಿದೆ.

ಒಟ್ಟಾರೆಯಾಗಿ  ನಾಳೆ ರಾಜ್ಯದ  ನೂತನ ಮುಖ್ಯಮಂತ್ರಿ  ಕುಮಾರಸ್ವಾಮಿ ಬಹುಮತ ಸಾಬೀತು ಪಡಿಸುತ್ತಾರಾ,,,, ಬಿಜೆಪಿ ಅದಕ್ಕೆ ಅಡ್ಡಗಾಲು ಹಾಕುತ್ತದಾ ಎಂಬುದನ್ನು ಕಾದು ನೋಡಬೇಕಿದೆ.

Leave a Reply

Your email address will not be published.

Social Media Auto Publish Powered By : XYZScripts.com