ಮಂಡ್ಯ : ಬೈಕ್-ಕಾರುಗಳ ನಡುವೆ ಸರಣಿ ಅಪಘಾತ : ಕೂದಲೆಳೆ ಅಂತರದಲ್ಲಿ 10 ಜನ ಪಾರು

ಸರಣಿ ಅಪಘಾತದಲ್ಲಿ ಕೂದಲೆಳೆ ಅಂತರದಲ್ಲಿ ಹತ್ತು ಜನ ಪ್ರಣಾಪಾಯದಿಂದ ಪಾರಾಗಿರುವ ಘಟನೆ ಮಂಡ್ಯ ತಾಲ್ಲೂಕಿನ ರಾಗಿ ಮುದ್ದನಹಳ್ಳಿ ಗೇಟ್ ಬಳಿ ಗುರುವಾರ ನಡೆದಿದೆ. ಬೆಂಗಳೂರು ಕಡೆಯಿಂದ ಬರುತ್ತಿದ್ದ ಕಾರು ಡಿವೈಡರ್ ಗೆ ಡಿಕ್ಕಿಯಾಗಿದೆ.

ಮೈಸೂರು ಕಡೆಯಿಂದ ಚಲಿಸುತ್ತಿದ್ದ ಮತ್ತೊಂದು ಕಾರು ಹಾಗೂ ಬೈಕ್ ಗೆ ಡಿಕ್ಕಿಯಾದ ಪರಿಣಾಮ, ಬೈಕ್ ಸೇರಿ ಎರಡು ಕಾರುಗಳು ಸಂಪೂರ್ಣ ಜಖಂಗೊಂಡಿವೆ. ಅದೃಷ್ಟವಶಾತ್ ಹತ್ತು ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ತೀವ್ರವಾಗಿ ಗಾಯಗೊಂಡ ಇಬ್ಬರನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ಕಿಲೋಮೀಟರ್ ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿವೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com