ತಮಿಳುನಾಡು : ಸ್ಟೆರಲೈಟ್ ಘಟಕ ಮುಚ್ಚಲು ಆದೇಶಿಸಿದ ಮಾಲಿನ್ಯ ನಿಯಂತ್ರಣ ಮಂಡಳಿ

ತೂತುಕುಡಿಯಲ್ಲಿರುವ ಸ್ಟೆರಲೈಟ್ ತಾಮ್ರ ಸಂಸ್ಕರಣ  ಘಟಕವನ್ನು ತಕ್ಷಣ ಮುಚ್ಚುವಂತೆ ತಮಿಳುನಾಡು ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶಿಸಿದೆ. ತಮಿಳುನಾಡು ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರಾಗಿರುವ ಮೊಹಮ್ಮದ್ ನಸೀಮುದ್ದೀನ್ ಅವರು ಈ ಆದೇಶವನ್ನು ಹೊರಡಿಸಿದ್ದಾರೆ.

ಸ್ಟೆರ್ಲೈಟ್ ತಾಮ್ರ ಸಂಸ್ಕರಣ ಘಟಕಕ್ಕೆ ಪೂರೈಕೆಯಾಗುತ್ತಿದ್ದ ವಿದ್ಯುತ್ತನ್ನು ನಿಲ್ಲಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಗುರುವಾರ ಬೆಳಿಗ್ಗೆ 5.15 ರಿಂದ ವಿದ್ಯುತ್ ಪೂರೈಕೆಯನ್ನು ನಿಲ್ಲಿಸಲಾಗಿದೆ.

ಸ್ಟೆರಲೈಟ್ ತಾಮ್ರ ಸಂಸ್ಕರಣ ಘಟಕವನ್ನು ಮುಚ್ಚಬೇಕೆಂದು ಆಗ್ರಹಿಸಿ ತಮಿಳುನಾಡು ಸಾವಿರಾರು ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಈ ವೇಳೆ ನಡೆದ ಗೋಲೀಬಾರ್ ನಲ್ಲಿ 12 ಜನ ರೈತರು ಗುಂಡೇಟಿಗೆ ಬಲಿಯಾಗಿದ್ದರು.

Leave a Reply

Your email address will not be published.

Social Media Auto Publish Powered By : XYZScripts.com