ನಾಲ್ಕನೇ ವರ್ಷಕ್ಕೆ ಕಾಲಿಟ್ಟ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ : ಬೃಹತ್‌ ಸಮಾವೇಶವನ್ನುದ್ದೇಶಿಸಿ ಪ್ರಧಾನಿ ಭಾಷಣ

ದೆಹಲಿ : ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಇಂದಿಗೆ ನಾಲ್ಕು ವರ್ಷ ಪೂರೈಸಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಓರಿಸ್ಸಾದ ಕಟಕ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಮತ್ತೊಂದೆಡೆ ಕೇಂದ್ರ ಸರ್ಕಾರದ ಸಾಧನೆಗಳನ್ನು ಮನೆಮನೆಗೆ ತಲುಪಿಸುವ ಕೆಲಸವನ್ನು ಅಮಿತ್ ಶಾ ನೇತೃತ್ವದಲ್ಲಿ ಲಕ್ಷಾಂತರ ಮಂದಿ ಮಾಡುತ್ತಿದ್ದು, ಮೋದಿ ಸರ್ಕಾರದ ಸಾಧನೆಗಳು, ಅವುಗಳ ಪ್ರಯೋಜನಗಳ ಬಗ್ಗೆ ಜನರಿಗೆ ತಿಳಿಸುವ  ಕೆಲಸ ಮಾಡುತ್ತಿದ್ದು, 15ದಿನಗಳ ಕಾಲ ಈ ಕೆಲಸ ನಡೆಯಲಿದೆ. ಮೇ 27ರಿಂದ ಈ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವ ಸಲುವಾಗಿ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಿಗೆ ಈಗಾಗಲೆ ಪತ್ರ ಬರೆದಿರುವುದಾಗಿ ಬಿಜೆಪಿ ಕಾರ್ಯದರ್ಶಿ ಅರುಣ್ ಸಿಂಗ್ ಹೇಳಿದ್ದಾರೆ. ಜೊತೆಗೆ ಮೋದಿ ಆ್ಯಪ್‌ ಬಳಸುವ ಬಗ್ಗೆ ಜನರಿಗೆ ಮಾಹಿತಿ ನೀಡುವುದರ ಜೊತೆ ಸಾಧಕರಿಂದ ಸರ್ಕಾರದ ಬಗ್ಗೆ ಅಭಿಪ್ರಾಯ ಸಂಗ್ರಹಿಸುವಂತೆ ಕಾರ್ಯಕರ್ತರಿಗೆ ತಿಳಿಸಲಾಗಿದೆ.

 

 

Leave a Reply

Your email address will not be published.