ಮಂಡ್ಯ : KRS ಟೋಲ್ ಬಳಿ ಮಿನಿ ಬಸ್ ಪಲ್ಟಿ : ಏಳು ಜನರಿಗೆ ಗಾಯ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ಎಸ್ ಟೋಲ್ ಬಳಿ ಮಿನಿ ಬಸ್ ಒಂದು ಪಲ್ಟಿಯಾಗಿದ್ದು, ಏಳು ಜನರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದೆ. ಪ್ರವಾಸಕ್ಕೆಂದು ಬಂದಿದ್ದ ವೇಳೆ ಈ ಅವಘಡ ನಡೆದಿದೆ. ಗಾಯಗೊಂಡವರಲ್ಲಿ ಬೆಂಗಳೂರು, ಆಂಧ್ರಪ್ರದೇಶದ ಮೂಲದ ಪ್ರವಾಸಿಗರು ಸೇರಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿದ ಬಸ್ ಡಿವೈಡರ್‌ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿರುವ ನಾಗಲಕ್ಷ್ಮೀ ಎಂಬ ಮಹಿಳೆಯನ್ನು ಮೈಸೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಕೆ.ಆರ್.ಎಸ್ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com