ಬಿದ್ದು ಹೋಗುತ್ತಾ ಮೈತ್ರಿ ಸರ್ಕಾರ…? : ಸಿಎಂ ಸ್ಥಾನದ ಬಗ್ಗೆ ಹೀಗ್ಯಾಕಂದ್ರು ಸಿದ್ದರಾಮಯ್ಯ !

ಬೆಂಗಳೂರು :  ಮೈತ್ರಿ ಸರ್ಕಾರದ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಹೊಸ ಬಾಂಬ್‌ ಸಿಡಿಸಿದ್ದಾರೆ. ಸಮ್ಮಿಶ್ರ ಸರ್ಕಾರ ರಚನೆಯಾಗಿ ಎರಡು ದಿನ ಕಳೆಯುವುದರೊಳಗೆ ಸಿಎಂ ಸ್ಥಾನದ ಕುರಿತು ಮತ್ತೆ ಗೊಂದಲ ಶುರುವಾಗಿದೆ.

ಕುಮಾರಸ್ವಾಮಿಯವರು ಪೂರ್ಣಾವಧಿ ಸಿಎಂ ಆಗಿ ಮುಂದುವರಿಯುವ ಬಗ್ಗೆ ಇನ್ನೂ ಚರ್ಚೆ ನಡೆದಿಲ್ಲ ಎಂದಿದ್ದಾರೆ. ಈ ಮೂಲಕ ಮೈತ್ರಿ ಸರ್ಕಾರ ಐದು ವರ್ಷ ಪೂರೈಸುವುದು ಅನುಮಾನ ಎಂಬಂತೆ ಮಾತನಾಡಿದ್ದಾರೆ.

ರಾಜ್ಯ ಸಚಿವ ಸಂಪುಟ ರಚನೆ ಕುರಿತಂತೆ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಜೊತೆಗಿನ ಸಭೆ ರದ್ದಾಗಿದ್ದು, ರಾಹುಲ್ ವಿದೇಶಿ ಪ್ರವಾಸಕ್ಕೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ. ನಿಗಧಿಯಾಗಿದ್ದ ಸಭೆ ಮುಂದಿನ ವಾರಕ್ಕೆ ಮುಂದೂಡಲಾಗಿದ್ದು, ರಾಹುಲ್ ಗಾಂಧಿ ಜೊತೆ ಚರ್ಚೆ ನಡೆಸಿದ ಬಳಿಕ ನಿರ್ಧಾರ ಕೈಗೊಳ್ಳುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com