ಚೆನ್ನೈ ಮಡಿಲಿಗೆ IPL ಟ್ರೋಫಿ : ಮುಗ್ಗರಿಸಿದ ಸನ್‍ರೈಸರ್ಸ್ : ವಾಟ್ಸನ್ ಅಜೇಯ ಶತಕ

ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್, ಇಂಡಿಯನ್ ಪ್ರಿಮಿಯರ್ ಲೀಗ್ -11ನೇ ಸೀಸನ್ನಿನ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಮುಂಬೈನ ವಾಂಖೇಡೆ ಮೈದಾನದಲ್ಲಿ ರವಿವಾರ ನಡೆದ ಫೈನಲ್ ಪಂದ್ಯದಲ್ಲಿ ಸನ್ ರೈಸರ್ಸ್ ತಂಡವನ್ನು 8 ವಿಕೆಟ್ ಗಳಿಂದ ಮಣಿಸಿದ ಚೆನ್ನೈ ಸೂಪರ್ ಕಿಂಗ್ಸ್ ಮೂರನೇ ಬಾರಿಗೆ ಐಪಿಎಲ್ ಟ್ರೋಫಿಯನ್ನು ಎತ್ತಿ ಹಿಡಿದಿದೆ.

ಟಾಸ್ ಗೆದ್ದ ಚೆನ್ನೈ ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ 20 ಓವರುಗಳಲ್ಲಿ 6 ವಿಕೆಟ್ ನಷ್ಟಕ್ಕೆ 178 ರನ್ ಮೊತ್ತ ಸೇರಿಸಿತು. ಕೇನ ವಿಲಿಯಮ್ಸನ್ 47 ಹಾಗೂ ಯೂಸುಫ್ ಪಠಾಣ್ 45 ರನ್ ಗಳಿಸಿದರು.

ಗುರಿಯನ್ನು ಬೆನ್ನತ್ತಿದ ಚೆನ್ನೈ 18.3 ಓವರುಗಳಲ್ಲಿ ಕೇವಲ 2 ವಿಕೆಟ್ ನಷ್ಟಕ್ಕೆ 181 ರನ್ ಸೇರಿಸಿ ಗೆದ್ದು ಬೀಗಿತು. ಚೆನ್ನೈ ಆರಂಭಿಕ ಬ್ಯಾಟ್ಸಮನ್ ಶೇನ್ ವಾಟ್ಸನ್ ಅಜೇಯ ಶತಕ ದಾಖಲಿಸಿದರು. 57 ಎಸೆತಗಳನ್ನು ಎದುರಿಸಿದ ಶೇನ್ ವಾಟ್ಸನ್ 11 ಬೌಂಡರಿ ಹಾಗೂ 8 ಸಿಕ್ಸರ್ ಸಿಡಿಸಿ 117 ರನ್ ಗಳಿಸಿದರು.

Leave a Reply

Your email address will not be published.

Social Media Auto Publish Powered By : XYZScripts.com