ಮೋದಿಗೆ ಹೆದರಿದರಾ ಮಾಯಾವತಿ : ಪ್ರಧಾನಿ ವಿರೋಧಿ ಬಣದಿಂದ ಹಿಂದೆ ಸರಿದ BSP ನಾಯಕಿ

ಲಖನೌ : ಎಚ್‌ಡಿಕೆ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗಿ ಪ್ರಧಾನಿ ಮೋದಿ ವಿರುದ್ಧ ಒಗ್ಗಟ್ಟಿನಿಂದ ಹೋರಾಡಲು ಕರೆ ನೀಡಿದ್ದ ಬಿಎಸ್‌ಪಿ ನಾಯಕಿ ಮಾಯಾವತಿ ಉಲ್ಟಾ ಹೊಡೆದಿದ್ದಾರೆ.

ಬಿಎಸ್‌ಪಿಗೆ ಸೂಕ್ತ ಸ್ಥಾನಮಾನ ಕೊಟ್ಟರೆ ಮಾತ್ರ ಬಿಜೆಪಿ ವಿರೋಧಿಗಳ ಜೊತೆ  ಮೈತ್ರಿ ಮಾಡಿಕೊಳ್ಳುತ್ತೇವೆ. ಇಲ್ಲದಿದ್ದರೆ ನಮ್ಮದೇ ಪಕ್ಷ ಬಲವರ್ಧನೆ ಕಡೆ ನಾವು ಗಮನ ಹರಿಸುವುದಾಗಿ ಮಾಯಾವತಿ ಹೇಳಿದ್ದಾರೆ.

ಲಖನೌದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು ಒಂದು ವೇಳೆ ಬಿಎಸ್‌ಪಿಗೆ ಗೌರವಯುತ ಸ್ಥಾನಗಳನ್ನು ನೀಡದೇ ಹೋದಲ್ಲಿ ರಾಜ್ಯಗಳಲ್ಲಿ ಏಕಾಂಗಿಯಾಗಿ ನಮ್ಮ ಪಕ್ಷ ಸ್ಪರ್ಧಿಸಲಿದೆ ಎಂದಿದ್ದಾರೆ.

ಇನ್ನೂ 20 ವರ್ಷ ಕಾಲ ನಾನೇ ಬಿಎಸ್‍ಪಿ ಅಧ್ಯಕ್ಷೆಯಾಗಿ ಮುಂದುವರಿಯುತ್ತೇನೆ ಎಂದಿದ್ದಾರೆ.

 

 

 

Leave a Reply

Your email address will not be published.