ಭೀಕರ ರಸ್ತೆ ಅಪಘಾತ : ಇಹಲೋಕ ತ್ಯಜಿಸಿದ ಕಾಂಗ್ರೆಸ್‌ ಶಾಸಕ ಸಿದ್ದು ನ್ಯಾಮಗೌಡ

ಬಾಗಲಕೋಟೆ : ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಜಮಖಂಡಿ ಶಾಸಕ ಸಿದ್ದು ನ್ಯಾಮ ಗೌಡ ಮೃತಪಟ್ಟಿದ್ದಾರೆ.

ಬಾಗಲಕೋಟೆ ತಾಲ್ಲೂಕಿನ ತುಳಸಿಗೇರಿ ಗ್ರಾಮದ ಬಳಿ ಬೆಳಗ್ಗೆ 4.30ರ ಸುಮಾರಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಲಾರಿಯನ್ನು ತಪ್ಪಿಸಲು ಹೋಗಿ ರಸ್ತೆ ಬದಿಯಿದ್ದ ಪೂಲ್‌ಗೆ ಕಾರು ಡಿಕ್ಕಿ ಹೊಡೆದಿದ್ದು, ಪರಿಣಾಮ ಕಾರಿನಲ್ಲಿದ್ದ ಶಾಸಕ ಸೇರಿದಂತೆ ಐವರಿಗೆ ಗಂಭೀರ ಗಾಯಗಳಾಗಿತ್ತು. ಕೂಡಲೆ ಐವರನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ  ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

70 ವರ್ಷದ ಸಿದ್ದು ನ್ಯಾಮಗೌಡ ಅವರ ಎದೆಗೆ ಗಂಭೀರವಾಗಿ ಗಾಯವಾಗಿದ್ದ ಹಿನ್ನೆಲೆಯಲ್ಲಿ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.  ಸಂಪುಟದಲ್ಲಿ ಸ್ಥಾನ ಪಡೆಯುವ ಸಲುವಾಗಿ ಇಂದು ದೆಹಲಿ ನಾಯಕರ ಮನವೊಲಿಸಲು ಸಿದ್ದು ನ್ಯಾಮನಗೌಡ ದೆಹಲಿಗೆ ತೆರಳಿ ಕಳೆದ ರಾತ್ರಿ ಗೋವಾಗೆ ಬಂದಿದ್ದ ಶಾಸಕ ರಸ್ತೆ ಮಾರ್ಗವಾಗಿ ಜಮಖಂಡಿಗೆ ತೆರಳುತ್ತಿದ್ದರು.

ಅಪಘಾತದಲ್ಲಿ ಚಾಲಕ ಪರಮಾನಂದ್ ಅಂಬಿ ಮತ್ತು ಅನ್ವರ್ ಮೊಮಿನ್ ಕೂಡ ಗಾಯಗೊಂಡಿದ್ದು, ಅವರಿಗೂ ಕೆರೂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಶಾಸಕ ಸಿದ್ದುನ್ಯಾಮಗೌಡ ಪಾರ್ಥಿವ ಶರೀರವನ್ನು ಮರಣೋತ್ತರ ಪರೀಕ್ಷೆಗಾಗಿ ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದ್ದು, ಶಾಸಕರ ಸಾವಿಗೆ ಗಣ್ಯರು ಕಂಬನಿ ಮಿಡಿದಿದ್ದಾರೆ.

 

Leave a Reply

Your email address will not be published.