ರೈತರ ಸಾಲಮನ್ನಾಗೆ ಆಗ್ರಹ : ಬಿಜೆಪಿ ಕರೆ ನೀಡಿದ್ದ ರಾಜ್ಯ ಬಂದ್‌ಗೆ ನೀರಸ ಪ್ರತಿಕ್ರಿಯೆ

ಬೆಂಗಳೂರು : ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಬಿಜೆಪಿ ನೀಡಿದ್ದ ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಸ್ ಸಂಚಾರ ಸುಗಮವಾಗಿ ನಡೆಯುತ್ತಿದ್ದು, ಯಾವುದೇ ಅಹಿತಕರ ಘಟನೆಗಳು ಬೆಳಕಿಗೆ ಬಂದಿಲ್ಲ.
ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ರಸ್ತೆ ಮಧ್ಯೆ ಟೈರ್ ಗಳನ್ನು ಸುಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನು ಹಲವೆಡೆ ಕಾರ್ಯಕರ್ತರು ಬಲವಂತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಮೈಸೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಬಿಜೆಪಿ ಕಾರ್ಯಕರ್ತರು ಬನ್ನಿಮಂಟಪದ ಡಿಪೋ ಬಳಿ ಸರ್ಕಾರಿ ಬಸ್ ಅನ್ನು ತಡೆಯಲು ಯತ್ನಿಸಿದಾಗ ಸಂಸದ ಪ್ರತಾಪ್ ಸಿಂಹ, ಶಾಸಕ ರಾಮದಾಸ್‌ ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಬಂದ್‌ಗೆ ಅನೇಕ ಸಂಘಟನೆಗಳು ಬೆಂಬಲ ಸೂಚಿಸದ ಹಿನ್ನೆಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com