13 ಮಂದಿಯ ಸಾವಿಗೆ ಕಾರಣವಾಗಿದ್ದ ಸ್ಟೆರ್ಲೈಟ್‌ ಕಂಪನಿಗೆ ಕೊನೆಗೂ ಬಿತ್ತು ಬೀಗ…

ಚೆನ್ನೈ : 13 ಮಂದಿಯಸಾವಿಗೆ ಕಾರಣವಾಗಿದ್ದ ತೂತುಕುಡಿಯ ವೇದಾಂತ ಗ್ರೂಪ್‌ನ ಸ್ಟೆರ್ಲೈಟ್‌ ತಾಮ್ರ ಘಟಕವನ್ನು ಶಾಶ್ವತವಾಗಿ ಮುಚ್ಚುವಂತೆ ತಮಿಳುನಾಡು ಸರ್ಕಾರ ಆದೇಶಿಸಿದೆ.
ಇಂದು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ನೇತೃತ್ವದಲ್ಲಿ ನಡೆದ ತುರ್ತು ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.
 ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಅವರು, ಸ್ಟೆರ್ಲೈಟ್ ತಾಮ್ರ ಘಟಕವನ್ನು ಶಾಶ್ವತವಾಗಿ ಮುಚ್ಚಬೇಕು ಎಂಬ ನಾಗರಿಕರ ಒಕ್ಕೊರಲ ಅಭಿಪ್ರಾಯವನ್ನು ಪರಿಗಣಿಸಿ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ.
 ಇದೇ ಮೇ.22 ರಂದು ತೂತುಕುಡಿಯಲ್ಲಿ ಸ್ಟೆರ್ಲೈಟ್ ತಾಮ್ರ ಘಟಕದ ಕಾರ್ಯನಿರ್ವಹಣೆಯನ್ನು ವಿರೋಧಿಸಿ ರೈತರು ಹಿಂಸಾತ್ಮಕ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ನಡೆದ ಪೊಲೀಸ್‌ ಗೋಲಿಬಾರ್ ನಲ್ಲಿ 13 ಮಂದಿ ಮೃತಪಟ್ಟಿದ್ದರು.

5 thoughts on “13 ಮಂದಿಯ ಸಾವಿಗೆ ಕಾರಣವಾಗಿದ್ದ ಸ್ಟೆರ್ಲೈಟ್‌ ಕಂಪನಿಗೆ ಕೊನೆಗೂ ಬಿತ್ತು ಬೀಗ…

Leave a Reply

Your email address will not be published.

Social Media Auto Publish Powered By : XYZScripts.com