ಮುಗಿದಿಲ್ಲ ಸಂಪುಟ ರಚನೆಯ ಬಿಕ್ಕಟ್ಟು : ಹಣಕಾಸು ಖಾತೆಗೆ ಕಾಂಗ್ರೆಸ್-ಜೆಡಿಎಸ್‌ ಬಿಗಿಪಟ್ಟು

ಬೆಂಗಳೂರು :  ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದು ವಾರ ಕಳೆದರೂ ಸಚಿವ ಸಂಪುಟ ರಚನೆಯ ಗೊಂದಲ ಮಾತ್ರ ಇನ್ನೂ ಬಗೆಹರಿದಿಲ್ಲ. ಕಾಂಗ್ರೆಸ್- ಜೆಡಿಎಸ್ ನಡುವೆ ಖಾತೆ ಹಂಚಿಕೆ ಕುರಿತು ಹಗ್ಗಜಗ್ಗಾಟ ನಡೆಯುತ್ತಲೇ ಇದೆ.

ಈ ನಡುವೆ ಹಣಕಾಸು ಖಾತೆಗೆ ಜೆಡಿಎಸ್ ಮತ್ತು ಕಾಂಗ್ರೆಸ್ ಎರಡು ಪಕ್ಷಗಳು ಬಿಗಿಪಟ್ಟು ಹಿಡಿದಿವೆ. ಮೊದಲು ಬೇಷರತ್ ಬೆಂಬಲ ಕೊಡುವುದಾಗಿ ಹೇಳಿದ್ದ ಕಾಂಗ್ರೆಸ್ ಇದೀಗ ಡಿಸಿಎಂ ಹುದ್ದೆ ಜತೆಗೆ ಪ್ರಮುಖ ಖಾತೆಗಳಿಗೆ ಪಟ್ಟು ಹಿಡಿದಿದೆ. ಹೀಗಾಗಿ ಮೈತ್ರಿ ಸರ್ಕಾರದಲ್ಲಿ ಸಂಪುಟ ರಚನೆ ಕಗ್ಗಂಟಾಗಿದೆ ಎಂದು ಮೂಲಗಳು ತಿಳಿಸಿವೆ.

ಇನ್ನು ಹಣಕಾಸು ಖಾತೆ ಜೆಡಿಎಸ್ ಗೆ ಬಿಟ್ಟುಕೊಡಲು ಮಾಜಿ ಸಚಿವ ಡಿ.ಕೆ ಶಿವಕುಮಾರ್, ಡಿಸಿಎಂ ಜಿ.ಪರಮೇಶ್ವರ್ ಮತ್ತು  ಖರ್ಗೆ ಅವರು ಒಪ್ಪಿದ್ದಾರೆ ಎನ್ನಲಾಗುತ್ತಿದ್ದು, ಆದರೇ ಸಿದ್ದರಾಮಯ್ಯ ಹಣಕಾಸು ಖಾತೆಗೆ ಪಟ್ಟು ಹಿಡಿದ್ದಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಮತ್ತೊಂದೆಡೆ  ಕಾಂಗ್ರೆಸ್ ನಾಯಕರ ವಿರುದ್ದ ಕಾಂಗ್ರೆಸ್ ಹಿರಿಯ ಮುಖಂಡ ಗುಲಾಂ ನಬಿ ಅಜಾದ್ ಹಾಗೂ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಸಚಿವ ಸಂಪುಟ ರಚನೆ ಬಿಕ್ಕಟ್ಟಿಗೆ ನೀವೇ ಕಾರಣ ಎಂದು ಕಿಡಿಕಾರಿದ್ದಾರಂತೆ.

Leave a Reply

Your email address will not be published.