ಭಾರೀ ಮಳೆಗೆ ಮುಳುಗಿದ ಮಂಗಳೂರು : 2 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು : ಮುಂಗಾರು ಪೂರ್ವ ಮಳೆಗೆ ಮಂಗಳೂರು ತತ್ತರಿಸಿ ಹೋಗಿದೆ. ಕರಾವಳಿಯ ವಿವಿಧ ಪ್ರದೇಶಗಳಲ್ಲಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದ್ದು, ರಸ್ತೆಗಳೆಲ್ಲ ಕೆರೆಗಳಂತಾಗಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರಸ್ತೆಗಳೂ ಜಲಾವೃತವಾಗಿದ್ದು, ವಾಹನ ಸವಾರರ ಪರಿಸ್ಥಿತಿ ಹೇಳತೀರದಾಗಿದೆ.

ಹಲವೆಡೆ ಮನೆಗಳಿಗೆ ನೀರು ನುಗ್ಗಿದ್ದು, ಚರಂಡಿಯ ನೀರು ತುಂಬಿ ರಸ್ತೆಯ ಮೇಲೆ ಹರಿಯುತ್ತಿದೆ. ವಾಹನ ಸವಾರರು ಎಚ್ಚರ ವಹಿಸುವಂತೆ ಪೊಲೀಸರು ಎಲ್ಲೆಡೆ ಎಚ್ಚರಿಕೆ ನೀಡುತ್ತಿದ್ದಾರೆ. ಅಲ್ಲದೆ ವಿದ್ಯುತ್‌ ಕಂಬಗಳು, ಮರಗಳು ಧರೆಗುರುಳಿದ್ದು, ಎ ಲ್ಲೆಡೆ ಕತ್ತಲು ಆವರಿಸಿದೆ.

ಕಳೆದ 24 ಗಂಟೆಗಳಲ್ಲಿ ಮಂಗಳೂರು ನಗರದಲ್ಲಿ 146 ಮಿಮೀ ಮಳೆಯಾಗಿದೆ .ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಕಳೆದೆರಡು ವರ್ಷಗಳಲ್ಲಿ ಕರಾವಳಿಯಾದ್ಯಂತ ಉತ್ತಮ ಮಳೆಯಾಗಿದ್ದು 2017 ರಲ್ಲಿ ಶೇ. 20, 2016 ರಲ್ಲಿ ಶೇ.40ರಷ್ಟು ಮಳೆ ದಾಖಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com