ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಉಳಿಯಬೇಕು ಎಂದ ಜೆಡಿಎಸ್ ನಾಯಕ !!
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ.ದೇವೇಗೌಡ ಸುದ್ದಿಗೋಷ್ಠಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ಜನತೆ ಜೆಡಿಎಸ್ ಗೆ ಐದು ಸ್ಥಾನಗಳನ್ನ ಗೆಲ್ಲಿಸಿದ್ದಾರೆ. ಅದಕ್ಕಾಗಿ ಮೈಸೂರು ಭಾಗದ ಜನತೆಗೆ ಧನ್ಯವಾದ ತಿಳಿಸಿದ್ದಾರೆ.
ಈ ಬಾರಿ ಅತಂತ್ರ ವಿಧಾನ ಸಭೆ ನಿರ್ಮಾಣವಾಗುತ್ತೆ ಎಂದು ಮಾಧ್ಯಮಗಳು ಹೇಳಿದ್ದವು. ಅದೇ ರೀತಿ ಬಿಜೆಪಿ ಹಾಗೂ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಅಂತಾನೂ ಹೇಳಿದ್ದರು. ಹೆಚ್ಚು ಸ್ಥಾನ ಪಡೆದು ಬಿಜೆಪಿ ಅಧಿಕಾರ ಹಿಡಿಯುವಲ್ಲಿ ವಿಫಲವಾಯಿತು ಎಂದಿದ್ದಾರೆ. ಜೊತೆಗೆ ಕುಮಾರಸ್ವಾಮಿ ನಮ್ಮ ಪಕ್ಷ ಬಹುಮತ ಬಂದ್ರೆ ರೈತರ ಸಾಲಮನ್ನಾ ಮಾಡುತ್ತೇವೆ ಅಂದಿದ್ರು. ಆದರೆ ರಾಜ್ಯದ ಜನತೆ ಅದಕ್ಕೆ ಬೆಂಬಲ ನೀಡಲಿಲ್ಲ. ಮೈತ್ರಿ ಸರ್ಕಾರದಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾರೆ. ಇನ್ನೂ ಸಚಿವ ಸಂಪುಟ ರಚನೆ ಆಗಿಲ್ಲ.ರೈತರ ಸಾಲಮನ್ನಾ ಮಾಡಬೇಕಾದರೆ ಕಾಂಗ್ರೆಸ್ ನಾಯಕರ ಬೆಂಬಲ ಪಡೆಯಬೇಕಿದೆ ಎಂದಿದ್ದಾರೆ.
ನಾವು ಕುಮಾರಸ್ವಾಮಿ ಐದು ವರ್ಷ ಮುಖ್ಯಮಂತ್ರಿ ಆಗಿರುತ್ತಾರೆ ಎಂಬುದನ್ನಒಪ್ಪಿಕೊಂಡಿದ್ದೇವೆ. ಅದರೆ ಅವರ ಒಳ ಮಾತುಕತೆ ನಮಗೆ ಗೊತ್ತಿಲ್ಲ ಎಂದಿದ್ದಾರೆ.
ಕಾಂಗ್ರೆಸ್ ರಾಜ್ಯದಲ್ಲಿ ಉಳಿಯಬೇಕು. ಹಾಗಾಗಿ ರಾಹುಲ್ ಗಾಂಧಿ ದೇವೇಗೌಡರು ಮಾತುಕತೆಯಾಡಿದ್ದಾರೆ. ಜಾತ್ಯಾತೀತತೆ ಉಳಿಯಬೇಕಬ ನಿಟ್ಟಿನಲ್ಲಿ ಹೊಂದಾಣಿಕೆ ಮಾಡಿಕೊಳ್ಳಲಾಗಿದೆ. ಮೈತ್ರಿ ಸರ್ಕಾರದಲ್ಲಿ ಸಂಪುಟ ರಚನೆ ಎಷ್ಟು ಕಷ್ಟ ಅಂತ ನಡೆಸುವವರಿಗೇ ಗೊತ್ತು ಎಂದಿದ್ದಾರೆ.