ನಲಪಾಡ್‌ಗೆ ಇಂದೂ ಸಿಗಲಿಲ್ಲ ಜಾಮೀನು : ಮತ್ತೆ ಕಂಬಿ ಹಿಂದೆ ಹೋದ ಎಂಎಲ್‌ಎ ಪುತ್ರ

ಬೆಂಗಳೂರು : ಕಳೆದ ಮೂರು ತಿಂಗಳ ಹಿಂದೆ ಉದ್ಯಮಿ ಪುತ್ರ ವಿದ್ವತ್‌ ಮೇಲಿನ ಹಲ್ಲೆ  ಪ್ರಕರಣ ಎದುರಿಸುತ್ತಿರುವ ಶಾಸಕ ಹ್ಯಾರಿಸ್‌ ಪುತ್ರ ಮೊಹಮ್ಮದ್‌ ನಲಪಾಡ್‌ಗೆ ನ್ಯಾಯಾಲಯ ಜಾಮೀನು ನಿರಾಕರಿಸಿದೆ.

63 ನೇ ಎಸಿಎಂಎಂ ನ್ಯಾಯಾಲಯ ನಿನ್ನೆ ಪ್ರಕರಣ ವಿಚಾರಣೆ ನಡೆಸಿದ್ದು, ಇಂದಿಗೆ ತೀರ್ಪು ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸಿರುವ ನ್ಯಾಯಾಲಯ ಜಾಮೀನು ನಿರಾಕರಿಸಿದೆ.

ಘರ್ಜಿ  ಕೆಫೆಯಲ್ಲಿ ವಿದ್ವತ್‌ ಮೇಲೆ ಹಲ್ಲೆ ನಡೆಸಿದ್ದ ನಲಪಾಡ್‌ ಪ್ರಭಾವಿಯಾಗಿದ್ದು ಸಾಕ್ಷ್ಯ ನಾಶಪಡಿಸುವ ಸಾದ್ಯತೆಗಳು ಹೆಚ್ಚಿದ್ದು, ಈ ವಿಚಾರವನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿದೆ. ಈ ಹಿಂದೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ವೇಳೆ ನ್ಯಾಯಾಲಯ ಹಲ್ಲೆ ನಡೆಸಿದ ವೀಡಿಯೋ ದೃಶ್ಯಾವಳಿಗಳನ್ನು ಗಮನಿಸಿತ್ತು. ಹೀಗಾಗಿ ನಲಪಾಡ್‌ ಜಾಮೀನು ಪಡೆಯಲು ಅರ್ಹವಾಗಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟು, ಅರ್ಜಿ ತಿರಸ್ಕರಿಸಿದೆ ಎಂದು ಸರಕಾರಿ ಅಭಿಯೋಜಕ ಶ್ಯಾಮಸುಂದರ್‌ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಚಾರ್ಜ್‌ಶೀಟ್‌ ಸಲ್ಲಿಸಿದ್ದರೂ, ಆರೋಪಿ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಹೆಚ್ಚಿದೆ ಎಂದು ಕೋರ್ಟ್‌ ಅಭಿಪ್ರಾಯಪಟ್ಟಿರುವುದಾಗಿ ಹೇಳಿದ್ದಾರೆ.

40 thoughts on “ನಲಪಾಡ್‌ಗೆ ಇಂದೂ ಸಿಗಲಿಲ್ಲ ಜಾಮೀನು : ಮತ್ತೆ ಕಂಬಿ ಹಿಂದೆ ಹೋದ ಎಂಎಲ್‌ಎ ಪುತ್ರ

Leave a Reply

Your email address will not be published.

Social Media Auto Publish Powered By : XYZScripts.com