ಶುರುವಾಯ್ತು ಜೆಡಿಎಸ್‌ ವಿರುದ್ಧದ ಬಿಜೆಪಿ ವಾರ್‌ : ಎಚ್‌ಡಿಕೆ ವಿರುದ್ದ ಸಿಡಿದೆದ್ದ ಶೋಭಾ ಕರಂದ್ಲಾಜೆ

ಉಡುಪಿ : ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಸತ್ತುಹೋಗಿದೆ. ಒಬ್ಬ ಮುಖ್ಯಮಂತ್ರಿಯೇ ಎಲ್ಲಾ ಖಾತೆ ನಿಭಾಯಿಸಲು ಮುಂದಾಗುತ್ತಿದ್ದಾರೆ ಎಂದು ಕುಮಾರಸ್ವಾಮಿ ವಿರುದ್ಧ ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.

ಉಡುಪಿಯಲ್ಲಿ ಮಳೆ ಹಾನಿಗೊಳಗಾದ ಜಿಲ್ಲೆಯ ಪ್ರದೇಶಗಳಿಗೆ ಭೇಟಿ ನೀಡಿ, ಸಿಡಿಲು ಬಡಿದು ಸಾವನ್ನಪ್ಪಿದ ಗ್ರಾಮ ಪಂಚಾಯ್ತಿ ಸದಸ್ಯೆ ಶೀಲಾ ಕುಟುಂಬದ ಸದಸ್ಯರಿಗೆ ಕರಂದ್ಲಾಜೆ ಸಾಂತ್ವನ ಹೇಳಿದರು. ಪಡುಬಿದ್ರೆಯಲ್ಲಿ ನೀರು ಪಾಲಾದ ಬಾಲಕಿ ನಿಧಿ ಸಾವಿಗೆ ಸಂತಾಪ ವ್ಯಕ್ತಪಡಿಸಿದರು.

ಇದೇ ವೇಳೆ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ ಅವರು, ಸರ್ಕಾರ ಸರಿಯಾಗಿಲ್ಲದಿರುವುದಕ್ಕೆ ಅಧಿಕಾರಿಗಳು ನಿಧಾನವಾಗಿ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ತಕ್ಷಣ ಇಲ್ಲಿಗೆ ಭೇಟಿ ನೀಡಿ ಮನೆ-ತೋಟಗಳಿಗಾದ ಹಾನಿಯನ್ನು ಪರಿಶೀಲಿಸಿ, ಸೂಕ್ತ ಪರಿಹಾರ ಘೋಷಿಸುವಂತೆ ಒತ್ತಾಯಿಸಿದ್ದಾರೆ.

ಹದಿನೈದು ದಿನಗಳ ಕಾಲ ಕಾಂಗ್ರೆಸ್-ಜೆಡಿಎಸ್ ಶಾಸಕರು ರೆಸಾರ್ಟ್ ನಲ್ಲಿದ್ದರು. ಈಗ ದೆಹಲಿಯಲ್ಲಿ ಬೀಡು ಬಿಟ್ಟಿದಾರೆ, ಅವರು ಮಂತ್ರಿಗಿರಿಗಾಗಿ ಲಾಬಿ ನಡೆಸುತ್ತಿದ್ದಾರೆ. ಖಾತೆ ಹಂಚಿಕೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಜಗಳಕ್ಕೆ ಮುಂದಾಗಿವೆ, ಇವರಿಗೆ ರಾಜ್ಯದ ಜನತೆ ಬಗ್ಗೆ ಕಾಳಜಿಯಿಲ್ಲ ಎಂದು ಕಿಡಿ ಕಾರಿದ್ದಾರೆ.

Leave a Reply

Your email address will not be published.