BSY, ಶೆಟ್ಟರ್‌ ಅವರ ಬಳಿ ದುಡ್ಡೇ ಇಲ್ವಾ, ಯಾಕೆ ಕಾಂಗ್ರೆಸ್‌ನವರ ಮೇಲೆ ಮಾತ್ರ ದಾಳಿ ಮಾಡ್ತಿದ್ದಾರೆ : ಸಿದ್ದರಾಮಯ್ಯ

ಬೆಂಗಳೂರು : ಬಹುಮತ ಸಾಬೀತು ಮಾಡುವ ವೇಳೆ ಶಾಸಕರನ್ನು ಸಂಪರ್ಕಿಸಿ ಆಮಿಷ ಒಡ್ಡಿದ್ದ ಬಿಜೆಪಿಯವರ ಮೇಲೆ ಮೊದಲು ದಾಳಿ ನಡೆಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬಿಜೆಪಿಯವರು ಕಾಂಗ್ರೆಸ್‌ನವರನ್ನೇ ಟಾರ್ಗೆಟ್ ಮಾಡಿ ದಾಳಿ ಮಾಡುತ್ತಿದ್ದಾರೆ. ಯಡಿಯೂರಪ್ಪ, ಶೆಟ್ಟರ್ ಅವರ ಬಳಿ ಹಣವೇ ಇಲ್ಲವೇ. ಅವರನ್ನೆಲ್ಲ ಬಿಟ್ಟು ಕಾಂಗ್ರೆಸ್‌ನವರ ಮೇಲೆಯೇ ಯಾಕೆ ದಾಳಿ ಮಾಡುತ್ತಾರೆ ಎಂದು ಪ್ರಶ್ನಿಸಿದ್ದಾರೆ.

ಇದೇ ವೇಳೆ ಆರ್‍ಆರ್ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅಲ್ಲಿ ಗೆಲ್ಲುತ್ತೇವೆಂಬ ನಿರೀಕ್ಷೆ ಇತ್ತು. ನಿರೀಕ್ಷೆಯಂತೆ ಫಲಿತಾಂಶ ಬಂದಿದೆ. ನಿಜಕ್ಕೂ ಇದು ಸಂತೋಷದ ವಿಚಾರ ಎಂದಿದ್ದಾರೆ.

ಬೆಂಗಳೂರಿನಲ್ಲಿ ನಾವು ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಜನ ಒಪ್ಪಿಕೊಂಡು ಮತ ನೀಡಿದ್ದಾರೆ. ಇಂದಿನ ಗೆಲುವು ಸೇರಿ ಒಟ್ಟು 14 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯ ಸಾಧಿಸಿರುವುದಾಗಿ ಹೇಳಿದ್ದಾರೆ.

Leave a Reply

Your email address will not be published.