ಆರ್‌.ಆರ್‌ ನಗರ ಚುನಾವಣೆ : ಗೆಲುವಿನತ್ತ ಮುನಿರತ್ನ : ಕಾಂಗ್ರೆಸ್‌ನಿಂದ ಸಂಭ್ರಮಾಚರಣೆ

ಬೆಂಗಳೂರು : ಅಪಾರ್ಟ್‌ಮೆಂಟ್‌ ಒಂದರಲ್ಲಿ ಸಾವಿರಾರು ವೋಟರ್‌ ಐಡಿ ಪತ್ತೆಯಾದ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ರಾಜರಾಜೇಶ್ವರಿ ನಗರ ಚುನಾವಣೆಯ ಫಲಿತಾಂಶ ಕೆಲವೇ ಹೊತ್ತಿನಲ್ಲಿ ಹೊರಬೀಳಲಿದೆ.

ಬೆಳಗ್ಗೆ 8ಗಂಟೆಯಿಂದಲೇ ಮತ ಎಣಿಕೆ ಪ್ರಾರಂಭವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಅವರು ಆರಂಭದಿಂದಲೂ ಭಾರೀ ಮುನ್ನಡೆ ಕಾಯ್ದುಕೊಂಡಿದ್ದಾರೆ.

7 ಸುತ್ತಿನ ಮತ ಎಣಿಕೆಯ ಬಳಿಕ ಮುನಿರತ್ನ ಅವರು 61,517 ಮತಗಳು, ಮುನಿರಾಜು ಗೌಡ ಅವರು 25,225 ಮತಗಳು ಮತ್ತು ಜೆಡಿಎಸ್‌ನ ರಾಮಚಂದ್ರ ಅವರು 11,626 ಮತಗಳನ್ನು ಪಡೆದಿದ್ದಾರೆ. ಮುನಿರತ್ನ 36,392 ಮತಗಳ ಅಂತರದ ಮುನ್ನಡೆ ಸಾಧಿಸಿ ಗೆಲುವಿನತ್ತ ದಾಪುಗಾಲಿಟ್ಟಿದ್ದಾರೆ.  ನೋಟಾಗೆ 799 ಮತಗಳು ಚಲಾವಣೆಯಾಗಿವೆ.

ಮೊದಲ ಸುತ್ತಿನಲ್ಲಿ ಮುನಿರತ್ನ ಅವರು 9,342 ಮತಗಳನ್ನು ಪಡೆದಿದ್ದರೆ, ಬಿಜೆಪಿಯ ಮುನಿರಾಜುಗೌಡ 5,520 ಹಾಗೂ ಜೆಡಿಎಸ್‌ನ ರಾಮಚಂದ್ರ 1,539 ಮತಗಳನ್ನು ಪಡೆದಿದ್ದಾರೆ.

ಒಟ್ಟು 18 ಸುತ್ತುಗಳಲ್ಲಿ ಮತ ಎಣಿಕೆ ನಡೆಯಲಿದೆ. ಮತ ಎಣಿಕೆ ಕೇಂದ್ರದಲ್ಲಿ ಅಗತ್ಯ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಮುಂಜಾಗ್ರತೆ ಕ್ರಮವಾಗಿ ಮತ ಎಣಿಕೆ ಸುತ್ತ ಹಾಗೂ ಕ್ಷೇತ್ರದ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

Dailyhunt

Leave a Reply

Your email address will not be published.

Social Media Auto Publish Powered By : XYZScripts.com