ಆ್ಯಸಿಡ್‌ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ನಿರೂಪಕ ಚಂದನ್‌ ಪತ್ನಿ ಇನ್ನಿಲ್ಲ…

ಬೆಂಗಳೂರು : ಪತಿಯ ಸಾವಿನಿಂದ ಖಿನ್ನತೆಗೊಳಗಾಗಿ ಆ್ಯಸಿಡ್‌ ಸೇವಿಸಿದ್ದ ನಿರೂಪಕ ಚಂದನ್‌ ಪತ್ನಿ ಮೀನಾ ಮೃತಪಟ್ಟಿದ್ದಾರೆ.

ಪತಿ ಚಂದನ್ ಸಾವಿನ ಬಳಿಕ ತೀವ್ರ ನೊಂದಿದ್ದ ಮೀನಾ ಗುರುವಾರವಷ್ಟೇ ತನ್ನ 13 ವರ್ಷದ ಮಗುವನ್ನು ಕೊಲೆ ಮಾಡಿ ತಾನೂ ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೀನಾ ಗುರುವಾರ ರಾತ್ರಿ 10 ಗಂಟೆಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಖಾಸಗಿ ವಾಹಿನಿ ನಿರೂಪಕ ಚಂದನ್ ಸಾವಿನ ಬಳಿಕ ಮಾನಸಿಕವಾಗಿ ಕುಗ್ಗಿದ್ದ ಮೀನಾ ತೊಂದರೆ ಮಾಡಿಕೊಳ್ಳಬಹುದೆಂದು ಆಕೆಯ ಅಣ್ಣ ಹಾಗೂ ತಂದೆ ಒಂದು ವಾರದಿಂದ ಕಾವಲು ಕಾಯುತ್ತಿದ್ದರು. ಆದರೆ ಗುರುವಾರ ಬೆಳಗ್ಗೆ ದೊಡ್ಡಬಳ್ಳಾಪುರ ನಗರದ ಸೋಮೇಶ್ವರ ಬಡಾವಣೆಯಲ್ಲಿ ಯಾರೂ ಇಲ್ಲದ ವೇಳೆ ಮೀನಾ ತನ್ನ 13 ವರ್ಷದ ಮಗ ತುಷಾರ್ ನ ಕತ್ತು ಕೊಯ್ದು ಕೊಲೆ ಮಾಡಿದ್ದರು. ಬಳಿಕ ತಾನೂ ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಘಟನೆಯಲ್ಲಿ ಚಂದನ್ ಮಗ ತುಷಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದನು. ಆದರೆ ಮೀನಾ ಅವರನ್ನು ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿತ್ತು.

Leave a Reply

Your email address will not be published.

Social Media Auto Publish Powered By : XYZScripts.com