ಡಿಕೆಶಿ ಎಂದಿಗೂ ಒಂಟಿಯಲ್ಲ, ನಾವೆಲ್ಲ ಜೊತೆಗಿದ್ದೇವೆ : ಬಿಜೆಪಿ ವಿರುದ್ಧ ಒಗ್ಗಟ್ಟಿನ ಮಂತ್ರ ಜಪಿಸಿದ ಸಿದ್ದರಾಮಯ್ಯ

ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್‌ ನಾಯಕ ಡಿ.ಕೆ ಶಿ ಪರ ಬ್ಯಾಟಿಂಗ್ ಮಾಡಿದ್ದಾರೆ.  ಐಟಿ, ಇಡಿ ಮೂಲಕ ಕಾಂಗ್ರೆಸ್ ಮುಖಂಡ ಡಿ.ಕೆ ಶಿವಕುಮಾರ್ ಅವರ ಆಪ್ತರ ಮೇಲೆ ಸಿಬಿಐ ಕೋರ್ಟ್ ಸರ್ಚ್ ವಾರೆಂಟ್ ಹೊರಡಿಸಿದ ಸಂಬಂಧ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಡಿಕೆಶಿ ಎಂದಿಗೂ ಒಂಟಿಯಲ್ಲ ಅವರ ಜೊತೆ ನಾವಿದ್ದೇವೆ ಎಂದಿದ್ದಾರೆ.

ಗುರುವಾರ ನೋಟು ನಿಷೇಧದ ವೇಳೆ ಅಕ್ರಮ ಎಸಗಿದ್ದಾರೆ ಎಂಬ ಆರೋಪದಡಿ ಸಿಬಿಐ ವಿಶೇಷ ನ್ಯಾಯಾಲಯ ಸರ್ಚ್ ವಾರೆಂಟ್ ಹೊರಡಿಸಿದ್ದು, ನಿನ್ನೆ ಡಿಕೆಶಿ ಆಪ್ತರ ಮೇಲೆ  ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿತ್ತು.

ಈ ಸಂಬಂಧ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ರಾಜಕೀಯ ದ್ವೇಷ ಸಾಧನೆಗೆ ನರೇಂದ್ರ ಮೋದಿ ಸರ್ಕಾರ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡುತ್ತಿರುವುದು ಖಂಡನೀಯ. ಇಂತಹ ಬೆದರಿಕೆಗೆ ಕಾಂಗ್ರೆಸ್ ನಾಯಕರು ಜಗ್ಗುವುದಿಲ್ಲ, ಬಗ್ಗುವುದೂ ಇಲ್ಲ. ಡಿ.ಕೆ. ಶಿವಕುಮಾರ್ ಒಬ್ಬಂಟಿಯಲ್ಲ, ಕಾಂಗ್ರೆಸ್ ಪಕ್ಷ ಜತೆಗಿದೆ ಎಂದು ಟ್ವೀಟ್‌ ಮಾಡಿದ್ದಾರೆ.

Leave a Reply

Your email address will not be published.