HDK 5 ವರ್ಷ ಪೂರೈಸಲಿ, ರಾಧಿಕಾ ಛಾಯೆ ಮತ್ತೆ ಬೀಳದಿರಲಿ : ಅನಿತಾ ಕುಮಾರಸ್ವಾಮಿಯಿಂದ ವಿಶೇಷ ಪೂಜೆ

ರಾಮನಗರ : ಜೆಡಿಎಸ್-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ರಚನೆಯಾಗಿದ್ದು, ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಆದರೆ ಸಾಲು ಸಾಲು ಸವಾಲುಗಳು ಎದುರಾಗಿರುವಾಗ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಎಷ್ಟು ದಿನ ಅಧಿಕಾರ ನಡೆಸುತ್ತಾರೆ ಎಂಬುದು ಎಲ್ಲರಿಗೂ ಪ್ರಶ್ನೆಯಾಗಿಯೇ ಉಳಿದಿದೆ.

ಈ ಹಿನ್ನೆಲೆಯಲ್ಲಿ ಇಂದು  ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಹುಣಸನಹಳ್ಳಿ ಶ್ರೀ ಬಿಸಲೇಶ್ವರಿ ದೇವಸ್ಥಾನಕ್ಕೆ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರ ಪತ್ನಿ, ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ವಿಶೇೋಷ ಪೂಜೆ ಸಲ್ಲಿಸಿದ್ದಾರೆ.

ರಾಮನಗರ- ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವಿಗಾಗಿ ಹರಕೆ ಮಾಡಿಕೊಂಡಿದ್ದೆ. ಎರಡು ಕ್ಷೇತ್ರದಲ್ಲಿ ತಮ್ಮ ಪತಿ ಆಯ್ಕೆಯಾದ ಹಿನ್ನೆಲೆಯಲ್ಲಿ ಹರಕೆ ತೀರಿಸಲು ಬಂದಿದ್ದೇನೆ. ಜೊತೆಗೆ ಐದು ವರ್ಷ ಮೈತ್ರಿ ಸರ್ಕಾರ ಯಶಸ್ವಿಯಾಗಲಿ ಎಂದು ವಿಶೇಷ ಪೂಜೆ ಮಾಡಿಸಿರುವುದಾಗಿ ಹೇಳಿದ್ದಾರೆ.

ಜೊತೆಗೆ ಜನತೆ ನಮಗೆ ಆಶಿರ್ವಾದ ಮಾಡಿದ್ದಾರೆ. ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ಕುಮಾರಸ್ವಾಮಿಯವರು ಈ ಕ್ಷೇತ್ರದ ಜನರ ನಂಬಿಕೆ ಉಳಿಸಿಕೊಳ್ತಾರೆ. ಚನ್ನಪಟ್ಟಣ, ರಾಮನಗರ ಕ್ಷೇತ್ರದ ಜನರ ಜೊತೆಗೆ ನಮಗೆ ಭಾವನಾತ್ಮಕ ಸಂಬಂಧ ಇದೆ. ರಾಮನಗರ ಕ್ಷೇತ್ರದ ಜನರು ಕೂಡ ನಾನೇ ಅಭ್ಯರ್ಥಿಯಾಗಬೇಕೆಂದು ಬಯಸಿದ್ದಾರೆ. ಸಮಯ ಬಂದಾಗ ಈ ವಿಚಾರವನ್ನ ಸ್ಪಷ್ಟಪಡಿಸುತ್ತೇನೆಂದು ಹೇಳುವ ಮೂಲಕ ರಾಮನಗರ ಕ್ಷೇತ್ರಕ್ಕೆ ಅಭ್ಯರ್ಥಿಯಾಗುವ ಸೂಚನೆ ನೀಡಿದ್ದಾರೆ. 5 ವರ್ಷಗಳ ಕಾಲ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಸಮಸ್ಯೆ ಬಾರದು. ಕುಮಾರಸ್ವಾಮಿ ಅವರು ಜನಮೆಚ್ಚುವ ಆಡಳಿತ ಕೊಡುತ್ತಾರೆ. ಚನ್ನಪಟ್ಟಣ ಕ್ಷೇತ್ರದ ಬಗ್ಗೆ ನನಗೆ ಒಂದು ವಿಷನ್ ಇದ್ದು, ಕ್ಷೇತ್ರದ ಅಭಿವೃದ್ದಿ ಬಗ್ಗೆ ಮುಂದೆ ನೀವೆ ಕಾದುನೋಡಿ ಎಂದಿದ್ದಾರೆ.

ಇಷ್ಟು ವರ್ಷ ಅಧಿಕಾರವಿಲ್ಲದೆ ಇದ್ದ ಕುಮಾರಸ್ವಾಮಿ ಅವರಿಗೆ ಈಗ ಅಧಿಕಾರ ಸಿಕ್ಕಿದೆ. ಈ ಮಧ್ಯೆ ಅವರ ಎರಡನೇ ಪತ್ನಿ ರಾಧಿಕಾ ಕುಮಾರಸ್ವಾಮಿ ಮತ್ತೆ ಬರಬಹುದು ಎಂಬ ಕಾರಣಕ್ಕೆ ವಿಶೇಷ ಪೂಜೆ ಸಲ್ಲಿಸಿದ್ದಾಗಿ,  ಜೆಡಿಎಸ್ನ ಬಲ್ಲ ಮೂಲಗಳು ತಿಳಿಸಿವೆ.

One thought on “HDK 5 ವರ್ಷ ಪೂರೈಸಲಿ, ರಾಧಿಕಾ ಛಾಯೆ ಮತ್ತೆ ಬೀಳದಿರಲಿ : ಅನಿತಾ ಕುಮಾರಸ್ವಾಮಿಯಿಂದ ವಿಶೇಷ ಪೂಜೆ

Leave a Reply

Your email address will not be published.

Social Media Auto Publish Powered By : XYZScripts.com