ಕರಾಳ ಶುಕ್ರವಾರ : ಬೆಳ್ಳಂಬೆಳಗ್ಗೆ ರಸ್ತೆ ಅಪಘಾತದಲ್ಲಿ ಪ್ರಾಣತೆತ್ತ 10 ಮಂದಿ

ಮುಂಬೈ : ಶುಕ್ರವಾರ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಕಾರ್‌ ಮತ್ತು ಟ್ರಕ್‌ ಡಿಕ್ಕಿಯಾದ ಪರಿಣಾಮ 10 ಮಂದಿ ಸಾವಿಗೀಡಾಗಿದ್ದಾರೆ.

ಪಂಜಾಬ್ ನ ಸಿಖ್ ಕುಟುಂಬದವರು ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಯಾವತ್ಮಾಲ್ ನ ಆರ್ನಿ ಪ್ರದೇಶದಲ್ಲಿ ಘಟನೆ ನಡೆದಿದೆ. ಕುಟುಂಬದವರೆಲ್ಲರೂ ಮೂರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಕಾರ್ ಮತ್ತು ಟ್ರಕ್ ವೇಗವಾಗಿ ಬಂದ ಪರಿಣಾಮ ಮುಖಾಮುಖಿ ಡಿಕ್ಕಿ ಹೊಡೆದಿವೆ. ಪರಿಣಾಮ ಹತ್ತು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರಲ್ಲಿ ಇಬ್ಬರು ಮಕ್ಕಳು ಇದ್ದುದ್ದಾಗಿ ಹೇಳಲಾಗಿದೆ.

ಇನ್ನು ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು,  ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com