ಸಂಗೊಳ್ಳಿ ರಾಯಣ್ಣ ಚಿತ್ರದ ನಿರ್ಮಾಪಕನ ವಾಹನಗಳನ್ನು ಜಪ್ತಿ ಮಾಡಿದ ಪೊಲೀಸರು….ಕಾರಣವೇನು…?

ಬೆಂಗಳೂರು : ಸಾರ್ವಜನಿಕರಿಗೆ ವಂಚನೆ ಮಾಡಿದ ಪ್ರಕರಣ ಸಂಬಂಧ ದರ್ಶನ್​ ಅಭಿನಯದ ಸಂಗೊಳ್ಳಿ ರಾಯಣ್ಣ ಚಿತ್ರದ ನಿರ್ಮಾಪಕ ಆನಂದ್​ ಅಪ್ಪುಗೋಳ್​ ಅವರ ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

33 ಲಕ್ಷ ರೂ ಮೌಲ್ಯದ ಫಾರ್ಚುನರ್, ಇನ್ನೋವಾ ಹಾಗೂ ಕ್ವಾಲಿಸ್ ಕಾರು, 7.85 ಲಕ್ಷ ಮೌಲ್ಯದ ವಿವಿಧ ಕಂಪೆನಿಯ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಒಟ್ಟು 41.35 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಗೊಳ್ಳಿ ರಾಯಣ್ಣ ಕೋ ಅಪರೇಟಿವ್ ಕ್ರೆಡಿಟ್ ಸೊಸೈಟಿ ಅಧ್ಯಕ್ಷರಾಗಿರುವ ಅಪ್ಪುಗೋಳ್ ಅವರು ಸಾರ್ವಜನಿಕ ಠೇವಣಿ ಹಣವನ್ನು ಸಕಾಲಕ್ಕೆ ಪಾವತಿಸದೆ ಗ್ರಾಹಕರಿಗೆ ವಂಚನೆ ಮಾಡಿರುವ ಕುರಿತು ಬೆಳಗಾವಿಯ ಖಡೇಬಜಾರ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ತಮ್ಮ ಸಹಕಾರಿ ಬ್ಯಾಂಕಿನಲ್ಲಿ ಸಾರ್ವಜನಿಕರಿಂದ ವಿವಿಧ ರೀತಿಯ ಠೇವಣಿ ಮತ್ತು ಬಾಂಡ್ ಗಳ ಮೂಲಕ ನೂರಾರು ಕೋಟಿ ಸಂಗ್ರಹ ಮಾಡಿ, ಸಂಗ್ರಹದ ಹಣದ ದುರ್ಬಳಕೆ ಮಾಡಿಕೊಂಡಿದ್ದಾರೆ. ಸರಿಯಾದ ಸಮಯಕ್ಕೆ ಸಾರ್ವಜನಿಕರಿಗೆ ಪಾವತಿಸುತ್ತಿಲ್ಲ ಎಂದು ಸಾರ್ವಜನಿಕರು ಆರೋಪಿಸಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಿದ್ದು, ಇಂದು ಅವರ ವಾಹನಗಳನ್ನು ಜಪ್ತಿ ಮಾಡಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com