ಕಾಂಗ್ರೆಸ್‌ ಇಂದು ರಾಜ್ಯದ ಪುಟಗೋಸಿ ಪಕ್ಷಕ್ಕೆ ಬಗ್ಗಿ ಸಲಾಂ ಹೊಡೆಯೋ ಪರಿಸ್ಥಿತಿಗೆ ಬಂದಿದೆ : ಅನಂತ್‌ ಹೆಗಡೆ ಲೇವಡಿ

ಕಾರವಾರ : ದೇಶದ ದೊಡ್ಡ ಪಕ್ಷ  ಎನಿಸಿಕೊಂಡಿರುವ ಕಾಂಗ್ರೆಸ್‌ ಇಂದು ರಾಜ್ಯದ ಪುಟಗೋಸಿ ಪಕ್ಷಕ್ಕೆ ಬಗ್ಗಿ ಸಲಾಂ ಹೊಡೆಯುವ ದಯನೀಯ ಪರಿಸ್ಥಿತಿಗೆ ಬಂದಿದೆ ಎಂದು ಕೇಂದ್ರ ಸಚಿವ ಅನಂತ್‌ ಕುಮಾರ್‌  ಹೆಗಡೆ ಲೇವಡಿ ಮಾಡಿದ್ದಾರೆ.

ಕುಮಟಾದಲ್ಲಿ ನಡೆದ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಸದ್ಯ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿದೆ. ಮುಂದಿನ ವರ್ಷಗಳಲ್ಲಿ ಇನ್ನು ಆರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಖಚಿತ. ಇಂದಲ್ಲಾ ನಾಳೆ ಕಾಂಗ್ರೆಸ್‌ನ ಆರ್‌.ವಿ ದೇಶಪಾಂಡೆ ಕ್ಷೇತ್ರದಲ್ಲಿ ಬಿಜೆಪಿ ಧ್ವಜ ಹಾರಾಡಬೇಕು ಎಂದಿದ್ದಾರೆ.

ಭಟ್ಕಳದಲ್ಲಿ ಬಿಜೆಪಿ ಗೆಲ್ಲಬೇಕು ಎಂಬ ಹಠ ಇತ್ತು. ಹಾಗೆಯೇ ಆಯಿತು. ಅದೇ ರೀತಿ ಇಂದು ಹಳಿಯಾಳ ಕ್ಷೇತ್ರದಲ್ಲಿಯೂ ಬಿಜೆಪಿ ಬಾವುಟ ಹಾರಾಡಬೇಕು. ಮುಂದಿನ ದಿನಗಳಲ್ಲಿ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಬಿಜೆಪಿ ಸೇರ್ತಾರೋ ಅಥವಾ ನಮ್ಮ ಪಕ್ಷದ ಹೊಸ ಅಭ್ಯರ್ಥಿ ಬರುತ್ತಾರೋ ಗೊತ್ತಿಲ್ಲ. ಒಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಧ್ವಜ ಹಾರೋವರೆಗೂ ನಾನು ರಾಜಕೀಯ ನಿವೃತ್ತಿ ಪಡೆಯಲ್ಲ ಎಂದಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com