ಬಿಜೆಪಿ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್‌ನವರ ಮೇಲೆ ದಾಳಿ ಮಾಡಬಾರದಾ ? : ಈಶ್ವರಪ್ಪ

ಶಿವಮೊಗ್ಗ : ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ಮೈತ್ರಿ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ರಾಜ್ಯ ಸರ್ಕಾರ ಅಂಗವಿಕಲ ಮಗು ಇದ್ದಂಗೆ, ಇದಕ್ಕೆ ಎರಡು ತಲೆ, ನಾಲ್ಕು ಕಾಲು, ಎಂಟು ಕೈ ಎಷ್ಟೋ ಹೊಟ್ಟೆ. ಹೀಗೆ ವಿಚಿತ್ರವಾದ ಮಗು ಹುಟ್ಟಿದೆ.ಈ ಮಗು ಬಹಳ ದಿನ ಉಳಿಯಲ್ಲ. ವಿಚಿತ್ರವಾಗಿ ಹುಟ್ಟಿರುವ ಮಗುವನ್ನು ಉಳಿಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ವ್ಯಂಗ್ಯ ಮಾಡಿದ್ದಾರೆ.

ಸಚಿವ ಸಂಪುಟ ಬುಧವಾರ ರಚನೆ ಮಾಡುತ್ತೇವೆ ಎಂದಿದ್ದಾರೆ. ನೋಡೋಣ. ಬಹಳಷ್ಟು ಜನ ಮಂತ್ರಿಗಿರಿಗಾಗಿ ಕಾಯುತ್ತಿದ್ದಾರೆ ಅಷ್ಟೆ. ಕಾಂಗ್ರೆಸ್ ಸರ್ಕಾರವನ್ನು ತಮ್ಮ ಹಿಡಿತದಲ್ಲಿಟ್ಟು ಕೊಳ್ಳಲು ಸಮನ್ವಯ ಸಮಿತಿ ರಚನೆ ಮಾಡಿ ಕೊಂಡು ಸಿದ್ದರಾಮಯ್ಯನವರನ್ನು ಅಧ್ಯಕ್ಷರನ್ನಾಗಿ ಮಾಡಿ ಕೊಂಡಿದ್ದಾರೆ. ಸಮನ್ವಯ ಸಮಿತಿ ಯಾಕೆ ಬೇಕು ಅಂತ ದೇವೆಗೌಡರು ಹೇಳುತ್ತಿದ್ದಾರೆ.ಬೇಷರತ್ತು ಬೆಂಬಲ ನೀಡುತ್ತೇವೆ ಎಂದು ಹೇಳಿದ್ದ ಕಾಂಗ್ರೆಸ್ ದಿನೆ ದಿನೆ ಷರತ್ತುಗಳನ್ನು ಹಾಕುತ್ತಿದೆ. ಜೆಡಿಎಸ್ ಮೇಲೆ ಸವಾರಿ ಮಾಡಲು ಯತ್ನಿಸುತ್ತಿದೆ ಎಂದಿದ್ದಾರೆ.

ಐಟಿ ದಾಳಿ ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಅವರು, ಯುಪಿಎ ಸರ್ಕಾರ ಇದ್ದಾಗ ಬಿಜೆಪಿಯವರ ಮೇಲೆ ನಡೆದ ದಾಳಿಯಲ್ಲಿ ಕಾಂಗ್ರೆಸ್ ಕೈವಾಡವಿತ್ತೆ?, ಆದಾಯ ತೆರಿಗೆ ಇಲಾಖೆ ಸ್ವತಂತ್ರವಾದ ಇಲಾಖೆಯಾಗಿದೆ. ಅಲ್ಲಿ ಯಾರ ಹಸ್ತಕ್ಷೇಪ ನಡೆಯುವುದಿಲ್ಲ.ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ, ಬಿಜೆಪಿಯವರ ಮೇಲೆ, ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಕಾಂಗ್ರೆಸ್ ನವರ ಮೇಲೆ ದಾಳಿ ನಡೆಸುವಂತಿಲ್ಲ ಅಂತ ಕಾನೂನು ಮಾಡಬೇಕೆ ಎಂದು ಡಿ.ಕೆ.ಶಿವಕುಮಾರ್ ಗೆ ಪ್ರಶ್ನೆ ಮಾಡಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com