ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತನ ಕೊಲೆ ಶಂಕೆ : ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ಕೋಲ್ಕತ್ತಾ : ಕಳೆದ ಎರಡು ದಿನಗಳ ಹಿಂದೆ ಬಿಜೆಪಿ  ಕಾರ್ಯಕರ್ತನ ಸಾವು ಮಾಸುವ ಮುನ್ನವೇ ಪಶ್ಚಿ ಮ ಬಂಗಾಳದಲ್ಲಿ ಯುವಕನೊಬ್ಬನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಪುರುಲಿಯಾ ಜಿಲ್ಲೆಯ ಬಲರಾಮ್‍ಪುರ ಗ್ರಾಮ ಡಾಬ ಪ್ರದೇಶದಲ್ಲಿ ಯುವಕನ ಶವ ಪತ್ತೆಯಾಗಿದೆ. ಮೃತನನ್ನು 32 ವರ್ಷದ ದುಲಾಲ್ ಕುಮಾರ್ ಎಂದು ಹೆಸರಿಸಲಾಗಿದ್ದು, ಇವರು ಬಿಜೆಪಿ ಸ್ಥಳೀಯ ಕಾರ್ಯಕರ್ತನಾಗಿದ್ದ ಎಂದು ಗ್ರಾಮಸ್ಥರು ಹೇಳಿದ್ದಾರೆ.

ಇದೇ ಬುಧವಾರ 20 ವರ್ಷದ ತ್ರಿಲೋಚನ್ ಮೆಹಾಟೊ ಶವವು ಪುರುಲಿಯಾ ಜಿಲ್ಲೆಯ ಬಲರಾಮ್‍ಪುರದಲ್ಲಿ ಮರಕ್ಕೆ ನೇಣು ಹಾಕಿದ ಸ್ಥಿತಿಯಲ್ಲಿ ಸಿಕ್ಕಿತ್ತು. ಟೀ ಶರ್ಟ್ ಮೇಲೆ ಬಿಜೆಪಿ ಪರ ಕೆಲಸ ಮಾಡುವ ಕಾರ್ಯಕರ್ತರಿಗೆ ಇದೇ ರೀತಿ ಶಿಕ್ಷೆ ಎಂದು ಬರೆಯಲಾಗಿತ್ತು. ಪತ್ರ ದೊರೆತ ಬಳಿಕ ಪಕ್ಷದಲ್ಲಿ ಇದ್ದಿದ್ದಕ್ಕೆ ಹತ್ಯೆ ನಡೆದಿದೆ ಎಂದು ತಿಳಿದುಬಂದಿದ್ದು, ಪೊಲೀಸರು ಕೊಲೆ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಈ ಘಟನೆ ಕುರಿತಂತೆ ರಾಜ್ಯದಲ್ಲಿ ಆಡಳಿತದಲ್ಲಿರುವ ತೃಣಮೂಲ ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರನ್ನು ಹತ್ಯೆ ಮಾಡುತ್ತಿದೆ ಎಂದು ಆರೋಪಿಸಲಾಗುತ್ತಿದೆ.

ಶುಕ್ರವಾರ ದುಲಾಲ್ ಕುಮಾರ್‌ ಹತ್ಯೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದರು. ಪೊಲೀಸ್ ಇಲಾಖೆಯು ಕಾನೂನು ಸುವ್ಯವಸ್ಥೆ ಜಾರಿಗೊಳಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಪೊಲೀಸ್ ಠಾಣೆಯ ಸುತ್ತ ಪ್ರತಿಭಟನೆ ಮಾಡುತ್ತಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com