ಎಚ್‌ಡಿಕೆ- ಕಮಲ್ ಹಾಸನ್‌ ಭೇಟಿ : ರೈತರಿಗಾಗಿ ಬಂದಿದ್ದೇನೆ ಕಾವೇರಿ ನೀರು ಕೊಡಿ ಎಂದ ನಟ

ಬೆಂಗಳೂರು : ಥಖ್ಯಾತ ನಟ, ರಾಜಕಾರಣಿ ಕಮಲ್‌ ಹಾಸನ್‌ ಇಂದು ಬೆಂಗಳೂರಿಗೆ ಆಗಮಿಸಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಕಮಲ್ ಹಾಸನ್ ಹಾಗೂ ಸಿಎಂ ಕುಮಾರಸ್ವಾಮಿ ಚರ್ಚೆ ನಡೆಸಿದ ಬಳಿಕ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಎರಡೂ ರಾಜ್ಯಗಳವರು ಸಹೋದರತ್ವದಿಂದ ಬಾಳಬೇಕಾಗಿದೆ.  ನಾನು ಸರ್ಕಾರದ ಪ್ರತಿನಿಧಿಯಾಗಿ ಕರ್ನಾಟಕಕ್ಕೆ ಬಂದಿಲ್ಲ, ಜನರ ಪ್ರತಿನಿಧಿಯಾಗಿ ಬಂದಿದ್ದೇನೆ. ಅಷ್ಟೇ ಅಲ್ಲ ಕುರುವೈ ಬೆಳೆಗೆ ನೀರು ಕೇಳಲು ಬಂದಿದ್ದೇನೆ. ನನಗೆ ಈ ಸಂದರ್ಭದಲ್ಲಿ ಸಿನಿಮಾಗಿಂತ ಕಾವೇರಿ ವಿಷಯವೇ ಬಹಳ ಮುಖ್ಯ ಎಂದಿದ್ದಾರೆ.

ಕಾವೇರಿ ನಾವು ಹುಟ್ಟುವ ಮೊದಲೇ ಇತ್ತು. ಆದರೆ ನಾವೀಗ ಕಚ್ಚಾಡಿಕೊಳ್ಳುತ್ತಿದ್ದೇವೆ. ಈ ವಿಚಾರವನ್ನು ಎರಡೂ ರಾಜ್ಯಗಳ ರೈತರೇ ಬಗೆಹರಿಸಿಕೊಳ್ಳಬೇಕು. ನಮ್ಮ ಕೊನೆಯ ಆಯ್ಕೆ ಕೋರ್ಟ್ ಆಗಿರಬೇಕಿತ್ತು. ಆದರೆ ಈಗಾಗಲೇ ಪ್ರಕರಣ ಕೋರ್ಟ್ ನಲ್ಲಿದೆ. ಆದರೂ ನಾವು ಈ ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳುವ ಅಗತ್ಯವಿದೆ . ಈ ನಿಟ್ಟಿನಲ್ಲಿಯೇ ನಮ್ಮಿಬ್ಬರ ಚರ್ಚೆ ನಡೆದಿರುವುದಾಗಿ ಹೇಳಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com