ರಾಜ್ಯದಲ್ಲಿರುವುದು ಸಮ್ಮಿಶ್ರ ಸರ್ಕಾರ ಅಲ್ಲ, ಕಲಬೆರಕೆ ಸರ್ಕಾರ : ಪ್ರಹ್ಲಾದ್ ಜೋಷಿ

ಗದಗ : ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ರಚನೆ ಹಿನ್ನಲೆ, ಇದು ಸಮ್ಮಿಶ್ರ ಸರ್ಕಾರ ಅಲ್ಲ ಕಲಬೆರಕೆ ಸರ್ಕಾರ. ಈ ಸಮ್ಮಿಶ್ರ ಸರ್ಕಾರಕ್ಕೆ ಅಧಿಕಾರ ವಹಿಸಿಕೊಂಡು 15 ದಿನಗಳೂ ಕಳೆದ್ರೂ ಸಹ ಸಚಿವ ಸಂಪುಟ ರಚನೆ ಮಾಡಲಾಗುತ್ತಿಲ್ಲ ಎಂದು ಸಂಸದ ಪ್ರಲ್ಹಾದ ಜೋಶಿ ಹೇಳಿದ್ದಾರೆ.

ಗದಗ ನಗರದ ಖಾಸಗಿ ಹೊಟೇಲ್ ನಲ್ಲಿ ಕೇಂದ್ರ ಸರ್ಕಾರದ ನಾಲ್ಕು ವರ್ಷದ ಸಾಧನೆಗಳ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಸಚಿವ ಸಂಪುಟ ರಚನೆಯಾದರೆ ತಮ್ಮ ಸರ್ಕಾರ ಬೀಳುತ್ತೆ. ಇಂತಹ ಭಯದಲ್ಲಿಯೇ ಸರ್ಕಾರ ನಡೆಯುತ್ತಿದೆ. ಇನ್ನು ಮಾತು ಎತ್ತಿದ್ರೆ ನಾನು ರಾಜ್ಯದ ಜನರ ಮುಲಾಜಿನಲ್ಲಿಲ್ಲ ಎನ್ನುವ ಕುಮಾರಸ್ವಾಮಿ, ಯಾಕೆ ಚುನಾವಣೆ ಮುನ್ನ ರಾಜ್ಯದ ಜನರಿಗೆ ಸಾಲಮನ್ನಾ ಮಾಡುವ ವಚನ ನೀಡಿದ್ದರು ಎಂದು ಪ್ರಶ್ನಿಸಿದ್ದಾರೆ.

ಇನ್ನು ರಾಜ್ಯದಲ್ಲಿ ಅಪಾರ ಮಳೆಯಿಂದಾಗಿ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ ಸಹ ಅತೀವ ಹಾನಿಯಾಗಿದೆ. ಆದರೆ ರಾಜ್ಯ ಸರ್ಕಾರ ಅದರ ಕುರಿತು ಚಿಂತನೆ ನಡೆಸುತ್ತಿಲ್ಲ. ಕೇವಲ ಮಂತ್ರಿಮಂಡಲ ರಚನೆಯಲ್ಲಿ ತಲ್ಲೀನವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಸಂಸದ ಪ್ರಲ್ಹಾದ್ ಜೋಶಿ ಕಿಡಿಕಾರಿದ್ದಾರೆ.

Leave a Reply

Your email address will not be published.