ಕಾಲ ಸಿನಿಮಾ ಬಿಡುಗಡೆಗೆ ಅವಕಾಶ ಮಾಡಿಕೊಡಿ : ಕನ್ನಡಿಗರಿಗೆ ಕನ್ನಡದಲ್ಲೇ ಮನವಿ ಮಾಡಿದ ರಜಿನೀಕಾಂತ್‌

ಬೆಂಗಳೂರು : ಕಾಲಾ ಸಿನಿಮಾ ಬಿಡುಗೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಚಿತ್ರಮಂದಿರಗಳಿಗೆ ಭದ್ರತೆ ಒದಗಿಸುವಂತೆ ರಜಿನೀಕಾಂತ್‌ ಕನ್ನಡದಲ್ಲೇ ಮನವಿ ಮಾಡಿಕೊಂಡಿದ್ದಾರೆ.

ಕನ್ನಡದಲ್ಲೇ ಮಾತನಾಡಿರುವ ರಜಿನೀಕಾಂತ್, ನಾನೇನು ತಪ್ಪು ಮಾಡಿಲ್ಲ. ಸುಪ್ರೀಂಕೋರ್ಟ್ ಹೇಳಿರುವುದನ್ನೇ ನಾನು ಹೇಳಿದ್ದೇನೆ. ಸಿನಿಮಾ ನೋಡುವವರಿಗೆ ದಯವಿಟ್ಟು ತೊಂದರೆ ಮಾಡಬೇಡಿ. ಸಿನಿಮಾ ಬಿಡುಗಡೆಗೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದ್ದಾರೆ.

ಕಾವೇರಿ ವಿಚಾರ ಸಂಬಂಧ ರಜಿನೀಕಾಂತ್ ತಮಿಳುನಾಡಿನ ಪರ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ಕಾವೇರಿ ಪರ ಮಾತನಾಡಿದ ರಜಿನೀಕಾಂತ್ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆಯಾಗಬಾರದು ಎಂದು ಕನ್ನಡಪರ ಹೋರಾಟಗಾರರು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಚಿತ್ರತಂಡ ಹೈಕೋರ್ಟ್‌ ಮೊರೆ ಹೋಗಿತ್ತು. ಹೈಕೋರ್ಟ್‌ನಲ್ಲೂ ಕಾಲ ಸಿನಿಮಾ ಬಿಡುಗಡೆಗೆ ಗ್ರೀನ್ ಸಿಗ್ನಲ್‌ ಸಿಕ್ಕಿದ್ದು, ಈಗ ರಜಿನೀಕಾಂತ್‌ ಸಹ ಸಿನಿಮಾ ಬಿಡುಗಡೆಗೆ ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com