BIG BREAKING : ಕೆಪಿಸಿಸಿಗೆ ನೂತನ ಸಾರಥಿಯಾಗಿ ಆಯ್ಕೆಯಾದ ದಿನೇಶ್‌ ಗುಂಡೂರಾವ್‌ ?

ಬೆಂಗಳೂರು : ಮೈತ್ರಿ ಸರ್ಕಾರದಲ್ಲಿ ಇಂದು ವಚಿವ ಸಂಪುಟ ರಚನೆಯಾಗುತ್ತಿದೆ. ಈ ಮಧ್ಯೆ ಕಾಂಗ್ರೆಸ್‌ನಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು,  ದಿನೇಶ್‌ ಗುಂಡೂರಾವ್‌ ಅವರನ್ನು  ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್‌ ಪರಿಗಣಿಸಿಸಿದೆ ಎಂದು ಮೂಲಗಳು ತಿಳಿಸಿವೆ.

ಸದ್ಯದಲ್ಲೇ ಈ ಬಗ್ಗೆ ಅಧಿಕೃತ ಘೋಷಣೆ ಹೊರಬೀಳಲಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಡಿ.ಕೆ. ಶಿವಕುಮಾರ್, ಕೃಷ್ಣಬೈರೇಗೌಡ, ಎಂ.ಬಿ.ಪಾಟೀಲ್, ಬಿ.ಕೆ.ಹರಿಪ್ರಸಾದ್ ಹಾಗೂ ಕೆ.ಎಚ್.ಮುನಿಯಪ್ಪರಂತಹ ಘಟಾನು ಘಟಿಗಳು ನಾಯಕರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆಸುತ್ತಿದ್ದು ಈ ಮಧ್ಯೆ ದಿನೇಶ್‌ ಗುಂಡೂರಾವ್ ಅವರಿಗೆ ಪಟ್ಟ ತಾನಾಗಿಯೇ ಒಲಿದುಬಂದಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಆದರೆ ನಿಜವಾಗಿಯೂ ದಿನೇಶ್ ಗುಂಡೂರಾವ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ ಒಲಿಯುತ್ತಾ ಎಂಬುದು ಅಧಿಕೃತ ಘೋಷಣೆಯ ಬಳಿಕವಷ್ಟೇ ತಿಳಿಯಲಿದೆ.

Leave a Reply

Your email address will not be published.

Social Media Auto Publish Powered By : XYZScripts.com