ನನಗೆ ಸಚಿವ ಸ್ಥಾನ ಕೊಡಲಿಲ್ಲ, ಇದರಿಂದ ಪಕ್ಷಕ್ಕೆ ಭಾರೀ ಹೊಡೆತ ಬೀಳಲಿದೆ : ಬಿ.ಸಿ ಪಾಟೀಲ್‌

ಬೆಂಗಳೂರು  : ಸಚಿವ ಸಂಪುಟ ರಚನೆ ಕುರಿತಂತೆ ಕಾಂಗ್ರೆಸ್‌ ತಮ್ಮ ಸಚಿವರ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಶಾಸಕ ಬಿ.ಸಿ ಪಾಟೀಲ್ ಅವರ ಹೆಸರನ್ನು ಕೈ ಬಿಡಲಾಗಿದೆ. ಇದರಿಂದ ಬಿ.ಸಿ ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದು, ಪಕ್ಷ ನನ್ನನ್ನು ಕಡೆಗಣಿಸುತ್ತಿರುವುದಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯವು ನನಗೆ ಸಚಿವ ಸ್ಥಾನ ನೀಡುವುದಾಗಿ ಹೇಳಿದ್ದರು. ಆದರೆ ಯಾವುದೇ ಆಮಿಷಕ್ಕೊಳಗಾಗದೆ ನಾನು  ಕಾಂಗ್ರೆಸ್‌ನಲ್ಲೇ ಕೆಲಸ ಮಾಡಿದೆ. ಆದರೆ ಪಕ್ಷ ನನ್ನನ್ನು ಕಡೆಗಣಿಸಿದೆ. ಅಧಿಕಾರಕ್ಕಾಗಿ ನಾನೆಂದೂ ಆಸೆ ಪಟ್ಟಿಲ್ಲ. ಆದರೆ ಅರಮಕ್ಕೆ ತಕ್ಕ ಪ್ರತಿಫಲ ಬೇಕೆಂದು ನಿರೀಕ್ಷಿಸುತ್ತೇನೆ. ಸ್ಥಾನ ನೀಡದ್ದಕ್ಕೆ ನನಗೆ ವೈಯಕ್ತಿಯವಾಗಿ ನಷ್ಟವಾಗಿಲ್ಲ. ಆದರೆ ಕಾಂಗ್ರೆಸ್ ಪಕ್ಷ ದೊಡ್ಡ ನಷ್ಟ ಅನುಭವಿಸುತ್ತದೆ. ನಾನು ಪಕ್ಷದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿಲ್ಲ. ಕಾಂಗ್ರೆಸ್ ನ ಆಡಳಿತದ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿರುವುದಾಗಿ ಹೇಳಿದ್ದಾರೆ.

 

Leave a Reply

Your email address will not be published.