ಸರ್ಕಾರಿ ಅಧಿಕಾರಿಗಳಿಗಿಂತ ವೇಶ್ಯೆಯರೇ ಎಷ್ಟೋ ವಾಸಿ ಎಂದ ಬಿಜೆಪಿ ಶಾಸಕ !!

ಲಖನೌ : ಉತ್ತರ ಪ್ರದೇಶದ ಅನೇಕ ಮಂದಿ ಬಿಜೆಪಿ ಸಚಿವರು ಹಾಗೂ ಶಾಸಕರು ಒಂದಾದ ಮೇಲೊಂದರಂತೆ ವಿವಾದಾತ್ಮಕ ಹೇಳಿಕೆ ನೀಡುತ್ತಲೇ ಇದ್ದಾರೆ. ಅದಕ್ಕೆ ಮತ್ತೊಬ್ಬ ಶಾಸಕರ ಸೇರ್ಪಡೆಯಾಗಿದ್ದು, ಸರ್ಕಾರಿ ಅಧಿಕಾರಿಗಳಿಗಿಂತ ವೇಶ್ಯೆಯರೇ ವಾಸಿ ಎಂದಿದ್ದಾರೆ.
ಉತ್ತರ ಪ್ರದೇಶದಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡುವ ವೇಳೆ ಬಿಜೆಪಿ ಶಾಸಕ ಈ ಯಡವಟ್ಟು ಮಾಡಿಕೊಂಡಿದ್ದಾರೆ. ಸರ್ಕಾರಿ ಅಧಿಕಾರಿಗಳಿಗಿಂತ ವೇಶ್ಯೆಯರೇ ಎಷ್ಟೋ ಉತ್ತಮ. ವೇಶ್ಯೆಯರು ಹಣ ತೆಗೆದುಕೊಂಡು ಬಳಿಕ ಕೆಲಸ ಪೂರ್ತಿ ಮಾಡುತ್ತಾರೆ. ಅವರಿಗೆ ಯಾವ ನಿರೀಕ್ಷೆಯೂ ಇರುವುದಿಲ್ಲ. ಆದರೆ ಸರ್ಕಾರಿ ಅಧಿಕಾರಿಗಳು ಹಾಗಲ್ಲ. ಲಂಚ ಕೀಳುತ್ತಲೇ ಇರುತ್ತಾರೆ ಎಂದಿದ್ದಾರೆ.
ಸುರೇಂದ್ರ ಸಿಂಗ್ ಈ ರೀತಿಯ ಹೇಳಿಕೆ ನೀಡಿದ್ದು ಇದೇ ಮೊದಲೇನೂ ಅಲ್ಲ. ಫೆಬ್ರುವರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿಂಗ್, ಭಾರತ್‌ ಮಾತಾ ಕಿ ಜೈ, ವಂದೇ ಮಾತರಂ ಎನ್ನದವರಿಗೆ ಈ ದೇಶದಲ್ಲಿ ವಾಸಿಸಲು ಯಾವುದೇ ಹಕ್ಕಿಲ್ಲ, ‌ಇಂಥ ಜನರು ರಾಜಕೀಯ ಪ್ರವೇಶಿಸಲು ಅವಕಾಶ ನೀಡಬಾರದು ಎಂದು ಹೇಳಿಕೆ ನೀಡಿದ್ದರು.

Leave a Reply

Your email address will not be published.

Social Media Auto Publish Powered By : XYZScripts.com