ನವದೆಹಲಿ : ಮೇಡಂ ಟುಸ್ಸಾಡ್ಸ್ ಮ್ಯೂಸಿಯಂನಲ್ಲಿ ಕೊಹ್ಲಿ ಮೇಣದ ಪ್ರತಿಮೆ ಅನಾವರಣ

ನವದೆಹಲಿಯ ಮೇಡಮ್ ಟುಸ್ಸಾಡ್ಸ್ ಮ್ಯೂಸಿಯಂನಲ್ಲಿ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಮೇಣದ ಪ್ರತಿಮೆಯನ್ನು ಬುಧವಾರ ಅನಾವರಣಗೊಳಿಸಲಾಯಿತು. ಈಗಾಗಲೇ ದೆಹಲಿ ಮ್ಯೂಸಿಯಂನಲ್ಲಿ ಇಂಗ್ಲೆಂಡ್ ಫುಟ್ಬಾಲ್ ಆಟಗಾರ ಡೇವಿಡ್ ಬೆಕಮ್, ಅರ್ಜೆಂಟೀನಾ ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ, ಮಾಜಿ ಕ್ರಿಕೆಟಿಗ ಕಪಿಲ್ ದೇವ್, ಓಲಿಂಪಿಕ್ ಪದಕ ವಿಜೇತ ಓಟಗಾರ ಉಸೇನ್ ಬೋಲ್ಟ್ ಅವರ ಪ್ರತಿಮೆಗಳಿವೆ.

Image result for madame tussauds delhi kohli virat

Image result for madame tussauds delhi kohli virat

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿರಾಟ್ ಕೊಹ್ಲಿ ‘ ನನ್ನ ಪ್ರತಿಮೆಯನ್ನು ನಿರ್ಮಿಸುವಲ್ಲಿ ಮಾಡಲಾಗಿರುವ ಅದ್ಭುತ ಕೆಲಸ ಹಾಗೂ ಕಲಾವಿದರ ಪ್ರಯತ್ನವನ್ನು ನಾನು ಪ್ರಾಮಾಣಿಕವಾಗಿ ಪ್ರಶಂಸಿಸುತ್ತೇನೆ, ನನ್ನನ್ನು ಆಯ್ಕೆ ಮಾಡಿದ್ದಕ್ಕೆ ಮೇಡಮ್ ಟುಸ್ಸಾಡ್ಸ್ ಮ್ಯೂಸಿಯಂನವರಿಗೆ ಧನ್ಯವಾದ ತಿಳಿಸುತ್ತೇನೆ. ಅಭಿಮಾನಿಗಳು ತೋರುವ ಪ್ರೀತಿ ಹಾಗೂ ಬೆಂಬಲಕ್ಕೆ ನಾನು ಸದಾ ಋಣಿಯಾಗಿರುತ್ತೇನೆ ‘ ಎಂದಿದ್ದಾರೆ.

Leave a Reply

Your email address will not be published.