ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ : ಸತೀಶ್ ಜಾರಕಿಹೊಳಿ ರಾಜೀನಾಮೆ… ?!

ಬೆಳಗಾವಿ : ಸಚಿವ ಸ್ಥಾನ ಸಿಗದ ಹಿನ್ನಲೆ ಸತೀಶ ಜಾರಕಿಹೊಳಿ ಅಸಮಾಧಾನ ಹೊರಹಾಕಿದ್ದು, ಎರಡು ದಿನಗಳಲ್ಲಿ ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನಿಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಕುರಿತು ಏನ್‌ಸುದ್ದಿಗೆ ಸತೀಶ್ ಜಾರಕಿಹೊಳಿ ಆಪ್ತ ಮೂಲಗಳು ಮಾಹಿತಿ ನೀಡಿದ್ದು, ನಾಳೆ ಸತೀಶ್, ಬೆಳಗಾವಿಗೆ ಆಗಮಿಸಿ ಕಾರ್ಯಕರ್ತರು ಹಾಗೂ ಅಭಿಮಾನಿಗಳ ಜೊತೆ ಮಾತುಕತೆ ನಡೆಸಲಿದ್ದಾರೆ. ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಿದ್ದಾರೆ ಎಂದು ತಿಳಿದುಬಂದಿದೆ.

ಮತ್ತೊಂದೆಡೆ ಸಚಿವ ಸ್ಥಾನ ನೀಡದ ಹಿನ್ನೆಲೆಯಲ್ಲಿ ಅಭಿಮಾನಿಗಳು ಕಾಂಗ್ರೆಸ್‌ ಪಕ್ಷದ ವಿರುದ್ದ ಬೀದಿಗಿಳಿದಿದ್ದು, ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೂ ರಾಜಿನಾಮೆ ನೀಡಿ ಹೊರಬರುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published.

Social Media Auto Publish Powered By : XYZScripts.com