ಮೈಸೂರು : ಕೆಂಪಯ್ಯನಹುಂಡಿ ಗ್ರಾಮದಲ್ಲಿ ಬೋನಿಗೆ ಬಿದ್ದ ಚಿರತೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಮೈಸೂರು : ಹಲವು ದಿನಗಳಿಂದ ಗ್ರಾಮಸ್ಥರಿಗೆ ಭಯ ಹುಟ್ಟಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದು ಗ್ರಾಮಸ್ಥರು ನಿಟ್ಟುಸಿರು ಬಿಡುವಂತೆ ಮಾಡಿದೆ. ಮೈಸೂರು-ತಿ.ನರಸೀಪುರ ರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಗ್ರಾಮದಲ್ಲಿ ಹಲವಾರು ದಿನಗಳಿಂದ ಆಗಾಗ ಕಾಣಿಸಿಕೊಳ್ಳುತ್ತಿದ್ದ ಚಿರತೆ, ನಾಯಿ, ಹಸುಗಳ ಮೇಲೆ ದಾಳಿ ಮಾಡಿ ತಿಂದು ತೇಗುತಿತ್ತು. ಇದರಿಂದ ಭಯಭೀತರಾಗಿದ್ದ ಗ್ರಾಮಸ್ಥರು ಚಿರತೆ ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಕೇಳಿಕೊಂಡಿದ್ದರು.

ಅದರಂತೆ ಗ್ರಾಮದ ಪೈಪ್ ಕಾಖಾ೯ನೆ ಬಳಿ ಬೋನನ್ನು ಇಡಲಾಗಿತ್ತು. ಆಹಾರ ಅರಸಿ ಬಂದ ಚಿರತೆ ಬೋನಿಗೆ ಬಿದ್ದಿರುವುದನ್ನು ಗಮನಿಸಿದ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಸೆರೆ ಸಿಕ್ಕಿರುವ ಚಿರತೆಯನ್ನು ಎಚ್.ಡಿ.ಕೋಟೆ ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಕ್ಕೆ ಬಿಟ್ಟಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com