ಮದುವೆಯಾಗ್ತೀನಿ ಅಂತ ಬಾಲಕಿ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ ಕಾಮುಕ ಬಳಿಕ ಮಾಡಿದ್ದೇನು ?

ಚಿಕ್ಕೋಡಿ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ನಿರಂತರ ಅತ್ಯಾಚಾರವೆಸಗಿದ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ.

ಅಪ್ರಾಪ್ತ ಬಾಲಕಿಯನ್ನು ಕಾಮುಕನೊಬ್ಬ ಮೇ. 1 ರಂದು ಪುಸಲಾಯಿಸಿ ಮಹಾರಾಷ್ಟ್ರದ ಸಾವಳಗಜ್ ಗ್ರಾಮಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ಕಾಮುಕನನ್ನು ಶಂಕರ ಶಿವಪ್ಪ ಮಾಳಗೆ (20) ಎಂದು ಹೆಸರಿಸಲಾಗಿದೆ. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಮೇ 1ರಂದು ಬಾಲಕಿ ಸ್ವಗ್ರಾಮದಿಂದ ಕಾಣೆಯಾಗಿದ್ದಳು. ಈ ಬಗ್ಗೆ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಬಾಲಕಿ ಕಾಣೆಯಾದ ಬಗ್ಗೆ ಪೋಷಕರು ದೂರು ದಾಖಲಿಸಿದ್ದರು. ಬಳಿಕ ಇಬ್ಬರೂ ಆಂಧ್ರದಲ್ಲಿ ಪತ್ತೆಯಾಗಿದ್ದು, ಅತ್ಯಾಚಾರವೆಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಾಲಕಿಯನ್ನು ವೈದ್ಯಕೀಯ ಪರೀಕ್ಷೆ ನಡೆಸಿ ಮಹಿಳಾ ಸಾಂತ್ವನ ಕೇಂದ್ರಕ್ಕೆ ರವಾನೆ ಮಾಡಲಾಗಿದೆ. ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪೊಸ್ಕೊ ಹಾಗೂ ಐಪಿಸಿ ಸೇಕ್ಷನ್ 376ರ ಅಡಿ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com