ಸತೀಶ್‌ ಜಾರಕಿಹೊಳಿಗೆ ಸ್ಥಾನ ನೀಡದ ಪಕ್ಷದಲ್ಲಿ ನಾವೂ ಇರಲ್ಲ : ಬೆಂಬಲಿಗರಿಂದ ರಾಜೀನಾಮೆ

ಬೆಳಗಾವಿ : ಸತೀಶ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಕಳೆದ ಎರಡು ದಿನಗಳಿಂದ ಬೆಳಗಾವಿಯಲ್ಲಿ ಪ್ರತಿಭಟನೆಗೆ ಮುಂದಾಗಿದ್ದ ಬೆಂಬಲಿಗರು‌ ಇದೀಗ ರಾಜೀನಾಮೆ ನೀಡಿದ್ದಾರೆ.
ಬೆಳಗಾವಿ ಜಿಪಂ ಉಪಾಧ್ಯಕ್ಷ ಅರುಣ ಕಟಾಂಬಳೆ ನೇತೃತ್ವದಲ್ಲಿ ನಗರದ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸಿದ ಜಿಲ್ಲೆಯ 15 ಜಿ.ಪಂ ಸದಸ್ಯರು, 28 ತಾ.ಪಂ‌ ಸದಸ್ಯರು, ಇಬ್ಬರು ಪಾಲಿಕೆ ಸದಸ್ಯರು, ಅಧ್ಯಕ್ಷರು, 3 ಜಿಲ್ಲೆಯ ಎಪಿಎಂಸಿ ಸದಸ್ಯರು, ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರು ಸೇರಿದಂತೆ 55ಕ್ಕೂ ಅಧಿಕ ಜನಪ್ರತಿನಿಧಿಗಳು ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಈ ಬೆಳವಣಿಗೆ ಜಿಲ್ಲಾ ರಾಜಕಾರಣದಲ್ಲಿ ಭಾರೀ ಮಹತ್ವ ಪಡೆದುಕೊಳ್ಳಲಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.


ಬಳಿಕ ಸುದ್ದಿಗೋಷ್ಠಿ ನಡೆಸಿದ ಮುಖಂಡ ಗಂಗಾಧರ ತವಗಮಠ, ಪಕ್ಷಕ್ಕೆ ಸತೀಶ ಜಾರಕಿಹೊಳಿ ಕೊಡುಗೆ ಅನನ್ಯ. ಪಕ್ಷ ಸತೀಶ ಜಾರಕಿಹೊಳಿ ಅವರಿಗೆ ಅನ್ಯಾಯ ಮಾಡಿದೆ. ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ, ರಾಜ್ಯ ಉಸ್ತುವಾರಿ ವೇಣುಗೋಪಾಲ, ರಾಷ್ಟ್ರೀಯ ನಾಯಕ ಅಹ್ಮದ್ ಪಟೇಲ್‌ ಅವರ ಕುತಂತ್ರದಿಂದ ಸತೀಶ್‌ಗೆ ಮಂತ್ರಿ ಸ್ಥಾನ ಕೈ ತಪ್ಪಿದೆ.
ಹೀಗಾಗಿ ನಾವು ಪಕ್ಷಕ್ಕೆ ಹಾಗೂ ನಮ್ಮ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇವೆ. ಬಳಿಕ ಸತೀಶ ಜಾರಕಿಹೊಳಿ ಅವರನ್ನು ಭೇಟಿಯಾಗಿ ಮುಂದಿನ ನಿರ್ಣಯ ಕೈಗೊಳ್ಳುತ್ತೇವೆ ಎಂದಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com