ಮುಂದುವರೆದ ವರುಣನ ಅಬ್ಬರ : ಇಂದು, ನಾಳೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಮಲೆನಾಡು, ಕರಾವಳಿ, ಉತ್ತರ ಕರ್ನಾಟಕ ಸೇರಿದಂತೆ ಬಹುತೇಕ ಕಡೆ ಮುಂಗಾರಿನ ವರ್ಷಧಾರೆ ಜೋರಾಗಿದೆ.

ಅಲ್ಲದೇ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲೂ  ವರುಣನ ಆರ್ಭಟ ಮುಂದುವರೆದಿದ್ದು,  ಭಾರಿ ಮಳೆ ಹಿನ್ನಲೆಯಲ್ಲಿ ಶಾಲಾ- ಕಾಲೇಜುಗಳಿಗೆ ಎರಡು ದಿನಗಳ ರಜೆ ಘೋಷಣೆ ಮಾಡಲಾಗಿದೆ.

 

ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶುಕ್ರವಾರ ಹಾಗೂ ಶನಿವಾರ ವಿಪರೀತ ಮಳೆ ಆರ್ಭಟ ಇರಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಭಾರಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಉಳಿದ ಜಿಲ್ಲೆಗಳಲ್ಲಿ ಗುಡುಗು ಗಾಳಿ ಸಹಿತ ಮಳೆ ಬೀಳುವ ಸಂಭವವಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿ, ಉತ್ತರ ಒಳನಾಡು ಹೆಚ್ಚಿನ ಪ್ರದೇಶಗಳು ಮತ್ತು ದಕ್ಷಿಣ ಒಳನಾಡಿನ ಅನೇಕ ಸ್ಥಳಗಳಲ್ಲಿ ಬಿರುಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮಂಗಳೂರಿನಲ್ಲಿ ಮಳೆಯಿಂದ ರಸ್ತೆಗಳು ಜಲಾವೃತವಾಗಿದ್ದು, ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇನ್ನ ಮುಂಬೈನಲ್ಲಿ ಭಾರಿ ಮಳೆಯ ನಿರೀಕ್ಷೆ ಇದ್ದು,  ಕಡಲಿಗೆ ಇಳಿಯದಂತೆ ಕೇರಳ ಮೀನುಗಾರರಿಗೆ  ಸೂಚನೆ ನೀಡಲಾಗಿದೆ.

 

 

Leave a Reply

Your email address will not be published.

Social Media Auto Publish Powered By : XYZScripts.com