Cricket : ಕೊಹ್ಲಿ, ಹರ್ಮನ್ ಪ್ರೀತ್ ಹಾಗೂ ಸ್ಮೃತಿ ಮಂದಾನಾಗೆ ಪಾಲಿ ಉಮ್ರಿಗರ್ ಪ್ರಶಸ್ತಿ

ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಪಾಲಿ ಉಮ್ರಿಗರ್ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. 2016-17 ಹಾಗೂ 2017-18ನೇ ಸಾಲಿನ ಅತ್ಯುತ್ತಮ ಅಂತರಾಷ್ಟ್ರೀಯ ಕ್ರಿಕೆಟಿಗ ಗೌರವಕ್ಕೆ ಪಾತ್ರರಾಗಿರುವ ಹಿನ್ನೆಲೆಯಲ್ಲಿ ವಿರಾಟ್ ಕೊಹ್ಲಿಗೆ ಪಾಲಿ ಉಮ್ರಿಗರ್ ಪ್ರಶಸ್ತಿ ನೀಡಲಾಗುತ್ತಿದೆ.

ಭಾರತ ಮಹಿಳಾ ಕ್ರಿಕೆಟ್ ತಂಡದ ಸದಸ್ಯರಾದ ಹರ್ಮನ್ ಪ್ರೀತ್ ಕೌರ್, ಸ್ಮೃತಿ ಮಂದಾನಾ ಅವರಿಗೂ ಪಾಲಿ ಉಮ್ರಿಗರ್ ಪ್ರಶಸ್ತಿ ಘೋಷಿಸಲಾಗಿದೆ. ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಬೆನ್ನೆಲುಬಾಗಿರುವ ಹರ್ಮನ್ ಪ್ರೀತ್ ಕೌರ್ 2016-17 ರಲ್ಲಿ ಹಾಗೂ ಆರಂಭಿಕ ಆಟಗಾರ್ತಿ ಸ್ಮೃತಿ ಮಂದಾನಾ 2017-18ರಲ್ಲಿ ಅತ್ಯುತ್ತಮ ಅಂತರಾಷ್ಟ್ರೀಯ ಮಹಿಳಾ ಕ್ರಿಕೆಟರ್ ಪ್ರಶಸ್ತಿ ಪಡೆದಿದ್ದರು.

ಜೂನ್ 12ರಂದು ಮಂಗಳವಾರ ಬೆಂಗಳೂರಿನಲ್ಲಿ ನಡೆಯಲಿರುವ ಬಿಸಿಸಿಐ ವಾರ್ಷಿಕ ಪ್ರಶಸ್ತಿ ಸಮಾರಂಭದಲ್ಲಿ ವಿರಾಟ್ ಕೊಹ್ಲಿ, ಸ್ಮೃತಿ ಮಂದಾನಾ ಹಾಗೂ ಹರ್ಮನ್ ಪ್ರೀತ್ ಕೌರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.

Leave a Reply

Your email address will not be published.

Social Media Auto Publish Powered By : XYZScripts.com