ಹಿಂದೂಗಳಿಗೆ ಉಗ್ರರ ಪಟ್ಟ : ಪ್ರಿಯಾಂಕಾ ಛೋಪ್ರಾ ಪರ ಭಾರತೀಯರ ಕ್ಷಮೆ ಕೇಳಿದ ಅಮೆರಿಕ ಟಿವಿ

ದೆಹಲಿ : ಬಾಲಿವುಡ್‌ ನಟಿ ಪ್ರಿಯಾಂಕಾ ಛೋಪ್ರಾ ಹಾಲಿವುಡ್‌ನ ಕ್ವಾಂಟಿಕೋ ಸೀರೀಸ್‌ನಲ್ಲಿ ನಟಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರವೇ. ಕೆಲ ದಿನಗಳ ಹಿಂದೆ ಪ್ರಸಾರವಾದ ಕ್ವಾಂಟಿಕೋ ಸಂಚಿಕೆಯಲ್ಲಿ ಭಾರತೀಯರನ್ನು ಉಗ್ರರೆಂದು ಬಿಂಬಿಸಿದ್ದು, ಎಲ್ಲೆ ಡೆ ಆಕ್ರೋಶಕ್ಕೆ ಕಾರಣವಾಗಿದ್ದು, ಈ ಹಿನ್ನೆಲೆಯಲ್ಲಿ ಅಮೆರಿಕದ ಎಬಿಸಿ ಮಾಧ್ಯಮ ಭಾರತೀಯರ ಕ್ಷಮೆಯಾಚಿಸಿದೆ.

ಅಮೆರಿಕದ ಎಬಿಸಿ ಟಿವಿಯಲ್ಲಿ ಕ್ವಾಂಟಿಕೋ ಸೀರೀಸ್‌ ಪ್ರಸಾರವಾಗುತ್ತಿದ್ದು, ಇದರಲ್ಲಿ ಪ್ರಿಯಾಂಕಾ ನಟಿಸುತ್ತಿದ್ದಾರೆ. ಕಳೆದ ವಾರ ಬಿಡುಗಡೆಗೊಂಡ ಸಂಚಿಕೆಯಲ್ಲಿ ಭಾರತೀಯರನ್ನು ಹಿಂದೂ ಉಗ್ರರೆಂದು ಬಿಂಬಿಸಲಾಗಿತ್ತು. ಪ್ರಸಾರವಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದ್ದಲ್ಲದೆ, ಹಣಕ್ಕೋಸ್ಕರ ಭಾರತೀಯರ ವಿರುದ್ಧ ನಟಿಸುವ ನಿಮಗೆ ನಾಚಿಕೆಯಾಗಬೇಕು ಎಂದು ಆರೋಪಿಸಿ, ಕ್ಷಮೆಯಾಚಿಸಬೇಕು ಎಂದು ನೆಟ್ಟಿಗರು ಪ್ರಿಯಾಂಕಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಹಿನ್ನೆಲೆಯಲ್ಲಿ ಸಂಸ್ಥೆಯು ಸಂಚಿಕೆಯಲ್ಲಿ ಬರುವ ಸನ್ನಿವೇಶಕ್ಕೂ ನಟಿ ಪ್ರಿಯಾಂಕ ಚೋಪ್ರಾಗೂ ಯಾವುದೇ ಸಂಬಂಧವಿಲ್ಲ, ಕೇವಲ ಅವರು ಪಾತ್ರ ನಿರ್ವಹಿಸಿದ್ದಾರೆ. ಅಲ್ಲದೇ ಧಾರಾವಾಹಿಯ ಯಾವುದೇ ತಯಾರಿಯಲ್ಲಿ ಅವರು ಭಾಗವಹಿಸಿಲ್ಲ. ಭಾರತೀಯರ ಭಾವನೆಗೆ ಧಕ್ಕೆಯಾದ ಹಿನ್ನೆಲೆಯಲ್ಲಿ ನಾವು ಕ್ಷಮೆಯಾಚಿಸುತ್ತಿದ್ದೇವೆ ಎಂದು ಎಬಿಸಿ ಹೇಳಿದೆ.

Leave a Reply

Your email address will not be published.