ಮಾತು ತಪ್ಪಿದ ಮುಖ್ಯಮಂತ್ರಿ : ಕುಮಾರಸ್ವಾಮಿ ವಿರುದ್ಧ ದೇವೇಗೌಡರ ಅಸಮಾಧಾನ !!

ಬೆಂಗಳೂರು : ಖಾತೆ  ಹಂಚಿಕೆ ವಿಚಾರವಾಗಿ ಮತ್ತೆ ಅಸಮಾಧಾನ ಭುಗಿಲೆದ್ದಿದೆ. ಚಾಮುಂಡೇಶ್ವರಿ  ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ದ ಭಾರೀ ಮತಗಳ ಅಂತರದಿಂದ ಗೆದ್ದಿದ್ದ ಜಿ.ಟಿ ದೇವೇಗೌಡರು ಸಿಎಂ ವಿರುದ್ಧ ತೀವ್ರ ಅಸಮಾಧಾನಗೊಂಡಿದ್ದಾರೆ.

ಕುಮಾರಸ್ವಾಮಿ ಕೊಟ್ಟ ಮಾತಿಗೆ ತಪ್ಪಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವುದಾಗಿ ತಿಳಿದುಬಂದಿದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರಚಾರ ಮಾಡುವ ವೇಳೆ ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಸ್ಥಾನಕ್ಕೆ ಸಮಾನವಾದ ಸ್ಥಾನವನ್ನು ಜಿ.ಟಿ ದೇವೇಗೌಡರಿಗೆ ನೀಡುತ್ತೇನೆ ಎಂದಿದ್ದರು. ಆದರೆ ಈಗ ಮಂತ್ರಿ ಪದವಿಯನ್ನು ನೀಡದೆ ಅವಮಾನಿಸಿದ್ದಾರೆ ಎಂದು ದೇವೇಗೌಡರು ಬೇಸರ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಜಿ.ಟಿ.ದೇವೇಗೌಡ ಅಭಿಮಾನಿಗಳು ಇದೇ ವಿಷಯವನ್ನು ಚರ್ಚೆ ಮಾಡುತ್ತಿದ್ದು, ಕುಮಾರಸ್ವಾಮಿ ಮಾತು ತಪ್ಪಿದ್ದಾರೆ ಎಂದು ಕಿಡಿ ಕಾರಿದ್ದಾರೆ.

ಸದ್ಯ ದೇವೇಗೌಡರು ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವ ಕುರಿತು ಆಲೋಚನೆ ಮಾಡುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಅವರ ಅಭಿಮಾನಿಗಳೂ ಕೂಡ ಸಾಮಾಜಿಕ ಜಾಲತಾಣದಲ್ಲಿ ಇದೇ ಅಭಿಪ್ರಾಯನ್ನು ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com