ಪಕ್ಷದಲ್ಲಿ ಏನು ನಡೆಯುತ್ತಿದೆ ಎಂಬುದೇ ಅರ್ಥವಾಗುತ್ತಿಲ್ಲ : ಲಕ್ಷ್ಮಿ ಹೆಬ್ಬಾಳ್ಕರ್‌

ಬೆಳಗಾವಿ : ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರು ಅಸಮಾಧಾನ ಹೊರಹಾಕುತ್ತಿದ್ದು, ರಾಜೀನಾಮೆ ನೀಡುವ ಬೆದರಿಕೆ ಹಾಕುತ್ತಿದ್ದಾರೆ. ಈ ಎಲ್ಲಾ ಬೆಳವಣಿಗೆ ಮಧ್ಯೆ ಕಾಂಗ್ರೆಸ್‌ ನಾಯಕಿ ಲಕ್ಷ್ಮಿ ಹೆಬ್ಬಾಳ್ಕರ್ ಪಕ್ಷದ ವಿರುದ್ದ ಅಸಮಾಧಾನ ಹೊರಹಾಕಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಏನಾಗುತ್ತಿದೆ. ಯಾರು, ಯಾವ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಏನು ನಡೆಯುತ್ತಿದೆ ಎಂಬುದೇ ಅರ್ಥವಾಗುತ್ತಿಲ್ಲ. ಯಾರು ಯಾವ ನಿರ್ಧಾರ ಮಾಡುತ್ತಾರೆ,ಯಾರು ಅದನ್ನು ಮುರಿಯುತ್ತಾರೆ ಅರ್ಥವಾಗುತ್ತಿಲ್ಲ. ಆದರೂ 20 ವರ್ಷ ಪಕ್ಷಕ್ಕಾಗಿ ದುಡಿದಿದ್ದೇನೆ. ಆದರೂ ಪಕ್ಷದ ಮಾನದಂಡ ನನಗೆ ಅರ್ಥವಾಗುತ್ತಿಲ್ಲ. ಅನೇಕರು ನನಗೆ ಸಚಿವ ಸ್ಥಾನ ತಪ್ಪಿಸಿದ್ದಾರೆ ಇದೆಲ್ಲ ನನಗೆ ಗೊತ್ತು ಎಂದಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com