“ದೇಶದಲ್ಲಿ ಕಾಂಗ್ರೆಸ್‌ ಕತೆ ಮುಗಿಯಿತು” : ಅಸಾದುದ್ದೀನ್ ಓವೈಸಿ ಹೇಳಿಕೆ

ದೆಹಲಿ : ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಆರ್‌ಎಸ್‌ಎಸ್‌ ಕಾರ್ಯಕ್ರಮಕ್ಕೆ ಹೋಗುವ ಮೂಲಕ ಕಾಂಗ್ರೆಸ್‌ ಅವನತಿಗೆ ಕಾರಣವಾಗಿದ್ದಾರೆ ಎಂದು ಎಐಐಇಇಎಂ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ ಹೇಳಿದ್ದಾರೆ.

ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ರಾಷ್ಟ್ರಪತಿಯಾಗಿದ್ದ ಪ್ರಣಬ್ ಮುಖರ್ಜಿ 50 ವರ್ಷಗಳಿಂದ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದರು. ಇಂತಹ ವ್ಯಕ್ತಿ ಏಕಾಏಕಿ ಆರ್‌ಎಸ್‌ಎಸ್‌ ಸಭೆಯಲ್ಲಿ ಭಾಗವಹಿಸಿದ್ದು, ಕಾಂಗ್ರೆಸ್‌ ಅವನತಿಗೆ ಇದೇ ಕಾರಣವಾಗಲಿದೆ. ಇನ್ನು ಪಕ್ಷದ ಮೇಲೆ ಭರವಸೆ ಇಡಲು ಸಾಧ್ಯವಿಲ್ಲ ಎಂದಿದ್ದಾರೆ.

ಕಳೆದ ಎರಡು ದಿನಗಳ ಹಿಂದಷ್ಟೇ ಪ್ರಣಬ್ ಮುಖರ್ಜಿ, ನಾಗ್ಪುರದಲ್ಲಿ ನಡೆದ ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಭಾಷಣ ಮಾಡಿ, ಜಾತ್ಯಾತೀತ ನಿಲುವಿಗೆ ವಿರುದ್ಧವಾಗಿ ವರ್ತಿಸಿರುವುದಾಗಿ ಆಕ್ರೋಶ ಹೊರಹಾಕಿದ್ದಾರೆ.

Leave a Reply

Your email address will not be published.